ಕೊಬ್ಬರಿಗೆ ಪ್ರೋತ್ಸಾಹ ಧನ ಹೆಚ್ಚಳ: ರಾಜ್ಯ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ನೆರವು ಒದಗಿಸಲು ಉಂಡೆ ಕೊಬ್ಬರಿಗೆ ಹೆಚ್ಚಿನ ಪ್ರೋತ್ಸಾಹಧನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಳೆ ಸ್ಥಿರೀಕರಣ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ.
ಉಂಡೆ ಕೊಬ್ಬರಿಗೆ ಒಂದು ಕ್ವಿಂಟಾಲ್ ಗೆ 10,300 ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಆದರೆ, ಇನ್ನೂ ಹೆಚ್ಚಿನ ಬೆಂಬಲ ಬಲೆ ಸಿಗಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು.
ಹೊಲದಲ್ಲಿ ಮರ ಬೆಳೆಸಿ 40 ಸಾವಿರ ರೂ.ವರೆಗೆ ಪ್ರೋತ್ಸಾಹ ಪಡೆಯಿರಿ
ಅದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಕ್ವಿಂಟಾಲ್ ಗೆ ಒಂದು ಸಾವಿರ ರೂ. ಹೆಚ್ಚುವರಿ ಪ್ರೋತ್ಸಾಹಧನ ರಾಜ್ಯ ಸರ್ಕಾರದಿಂದ ಭರಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರಿಂದಾಗಿ ರೈತರಿಗೆ ಪ್ರತಿ ಕ್ವಿಂಟಾಲ್ ಗೆ ಒಟ್ಟು 11,300 ರೂ. ದೊರೆಯಲಿದೆ. ರಾಜ್ಯ ಸರ್ಕಾರಕ್ಕೆ ಇದರಿಂದ ಸುಮಾರು 38 ಕೋಟಿ ರೂ. ರೂಪಾಯಿಗಳಷ್ಟು ಹೆಚ್ಚಿನ ಹೊರೆಯಾಗಲಿದೆ.
ರಾಗಿಯ ಇತಿಹಾಸ ಬಲ್ಲಿರೇನು? ತಿಳಿದರೆ ಬೆರಗಾಗುತ್ತೀರಿ
ಆದರೂ ರೈತರ ಹಿತ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಅವಧಿ ವಿಸ್ತರಣೆ:
ಈ ಸೌಲಭ್ಯವನ್ನು ಹೆಚ್ಚಿನ ರೈತರಗೆ ತಲುಪಿಸುವ ಸಲುವಾಗಿ ರೈತರಿಂದ ಖರೀದಿ ನೋಂದಣಿ ಅವಧಿಯನ್ನು ಆ.28ರ ವರೆಗೆ ವಿಸ್ತರಿಸಲಾಗಿದೆ. ಅಲ್ಲದೆ, ಖರೀದಿಯ ಕಾಲಾವಧಿಯನ್ನು ಸೆ.10ರ ವರೆಗೆ ವಿಸ್ತರಿಸಿ ಆದೇಶ ನೀಡಲಾಗಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸೌಲಭ್ಯ ಪಡೆಯಬೇಕು ಎಂದು ಉಪಮುಖ್ಯಮಂತ್ರಿ ಅವರು ಕೋರಿದ್ದಾರೆ.
ಎಳನೀರ ಬಗ್ಗೆ ನಿಮಗೆಷ್ಟು ಗೊತ್ತು; ತೆಂಗು ಕೃಷಿಯಲ್ಲಿದೆ ಆದಾಯದ ಗುಟ್ಟು
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆ.ಸಿ. ಮಧುಸ್ವಾಮಿ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ಮತ್ತು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾಗವಹಿಸಿದ್ದರು.
