ಪ್ರಧಾನಿ ಮೋದಿ ಸ್ವಾಗತಕ್ಕೆ ಮದುವನಗಿತ್ತಿಯಂತೆ ಶೃಂಗಾರ ಗೊಂಡ ಛೋಟಾ ಮುಂಬೈ

ಪ್ರಧಾನಿ ಮೋದಿ ಸ್ವಾಗತಕ್ಕೆ ಮದುವನಗಿತ್ತಿಯಂತೆ ಶೃಂಗಾರ ಗೊಂಡ ಛೋಟಾ ಮುಂಬೈ

ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಉತ್ಸವಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸುವ ಬ್ಯಾನರ್‌, ಕಟೌಟ್‌, ಫ್ಲೆಕ್ಸ್‌ಗಳು ನಗರದಾದ್ಯಂತ ರಾರಾಜಿಸುತ್ತಿವೆ.

ರಂಗೋಲಿ ಬಿಡಿಸುತ್ತಿರುವ ವಿದ್ಯಾರ್ಥಿನಿಯರು

ಇನ್ನು ಮೋದಿಯವರನ್ನು ಸ್ವಾಗತಿಸಲು ಬಿಜೆಪಿ ಮಹಿಳಾ ಕಾರ್ಯಕರ್ತರು ಹಾಗೂ ಎಸ್.ಆರ್. ಬೊಮ್ಮಾಯಿ ಶಾಲಾ ವಿದ್ಯಾರ್ಥಿಗಳು ವಿಮಾನ ನಿಲ್ದಾಣದ ಎದುರು ರಂಗೋಲಿ ಬಿಡಿಸಿದ್ದಾರೆ. ವಿಮಾನ ನಿಲ್ದಾಣದ ಪ್ರವೇಶ ದ್ವಾರದಿಂದ ಅಕ್ಷಯ ಪಾರ್ಕ್ ವರೆಗೂ ಈ ರಂಗೋಲಿ ಹಾಕಲಾವುದು.

ರೈಲ್ವೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವೇದಿಕೆಯ ಅಕ್ಕಪಕ್ಕ 2 ಹಾಗೂ ಸಾರ್ವಜನಿಕರ ಗ್ಯಾಲರಿಯಲ್ಲಿ 4 ಬೃಹತ್‌ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ. ಪ್ರಧಾನಿ ಅವರ ವಿಶ್ರಾಂತಿಗೆ ವೇದಿಕೆ ಹಿಂಭಾಗದಲ್ಲಿ 2 ಪ್ರತ್ಯೇಕ ಕೊಠಡಿ ಸಿದ್ಧಪಡಿಸಲಾಗಿದ್ದು, ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ.

ವೇದಿಕೆ ಎದುರಿನ ಬಲಭಾಗದಲ್ಲಿ 1 ಸಾವಿರ ಗಣ್ಯರಿಗೆ, ಎಡ ಭಾಗದಲ್ಲಿ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿರುವ 8 ಸಾವಿರ ಯುವಜನರಿಗೆ ಹಾಗೂ ಪಾಲಿಕೆ ಸದಸ್ಯರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಯುವ ಜನತೆಗೆ ಮೊದಲ ಪ್ರಾಶಸ್ತ್ಯ ನೀಡಿ, ಆಸನಗಳು ಉಳಿದರೆ ಸಾರ್ವಜನಿಕರಿಗೆ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.

Leave a reply

Your email address will not be published. Required fields are marked *