
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ

ಬೆಳಗಾವಿ: ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಹಾಜರಿದ್ದರು.