ದರ್ಗಾ ತೆರವಿನ ಹಿಂದೆ ಬಿಜೆಪಿ ಷಡ್ಯಂತ್ರವಿದೆ: ಅಲ್ತಾಫ್ ಹಳ್ಳೂರು

ದರ್ಗಾ ತೆರವಿನ ಹಿಂದೆ ಬಿಜೆಪಿ ಷಡ್ಯಂತ್ರವಿದೆ: ಅಲ್ತಾಫ್ ಹಳ್ಳೂರು

ಹುಬ್ಬಳ್ಳಿ: ಬಿಜೆಪಿ ಷಡ್ಯಂತ್ರ ನಡೆಸಿ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹ್ಮದ್ ಶಾ ಖಾದ್ರಿ ದರ್ಗಾ ತೆರವು ಮಾಡುತ್ತಿದೆ ಎಂದು ಹುಬ್ಬಳ್ಳಿ ಅಂಜುಮನ್ ಸಂಸ್ಥೆಯ ಮಾಜಿ ಅಧ್ಯಕ್ಷ ಅಲ್ತಾಫ್ ಹಳ್ಳೂರು ಆರೋಪಿಸಿದ್ದಾರೆ.

ತೆರವು ಕಾರ್ಯಾಚರಣೆ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿ.ಆರ್.ಟಿ.ಎಸ್‌. ಸಂಸ್ಥೆ ಹೆಸರಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿ ದರ್ಗಾ ತೆರವುಗೊಳಿಸುತ್ತಿದೆ. ಜೀವಂತ ಸಮಾಧಿಯಾದ ಧರ್ಮದ ಮುಖಂಡರ, ದರ್ಗಾ ತೆರವು ಮಾಡುತ್ತಿರುವುದು ಖಂಡನೀಯ. ಈ ಷಡ್ಯಂತ್ರದ ಹಿಂದಿರುವ ವ್ಯಕ್ತಿಗಳಿಗೆ ಶಾಪ ತಟ್ಟದೇ ಇರೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಆರ್.ಟಿ.ಎಸ್. ಮಾರ್ಗ ಕೆಲವೆಡೆ 37 ಮೀಟರ್ ಗಿಂತ ಕಡಿಮೆ ವಿಸ್ತೀರ್ಣವಿದೆ. ಆದರೆ ಈಗ ತೆರವು ಮಾಡುತ್ತಿರುವ ಬೈರಿದೇವರಕೊಪ್ಪದ ದರ್ಗಾ ಬಳಿ 45 ಮೀಟರ್ ವಿಸ್ತೀರ್ಣದ ಮಾರ್ಗವಿದ್ದರೂ, ತೆರವು ಯಾಕೆ ಎಂದು ಪ್ರಶ್ನಿಸಿದ್ದು, ಶಾಸಕ ಅರವಿಂದ ಬೆಲ್ಲದ ಅವರಿಗೆ ಸಂಬಂಧಿಸಿದ ಜಾಗ ಉಳಿಸಲು ಪೂರ್ವನಿಯೋಜಿತವಾಗಿ ನಡೆಸಿದ ಕಾರ್ಯವಿದು ಎಂದು ನೇರವಾಗಿ ಆರೋಪಿಸಿದ್ದಾರೆ.

ಬಿಜೆಪಿಯವರು ಚುನಾವಣೆ ಸಮೀಪಿಸುತ್ತಿದ್ದಂತೆ ಈ ರೀತಿ ಹಿಂದೂ-ಮುಸ್ಲಿಮರ ಮಧ್ಯೆ ವೈಷಮ್ಯ ಹುಟ್ಟಿಸುತ್ತ ಬಂದಿದ್ದಾರೆ ಎಂದರು.

ನೂತನ ತಂತ್ರಜ್ಞಾನ ಬಳಸಿ ದರ್ಗಾ ತೆರವುಗೊಳಿಸಲು ನಾವು ಕಾಲಾವಕಾಶ ನೀಡಬೇಕೆಂದು ಕೇಳಿದ್ದೇವೆ. ಸಮಾಜದ ಮುಖಂಡರು ಸಹ ಅದಕ್ಕೆ ಸಹಕರಿಸಲು ಸಿದ್ಧರಿದ್ದಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಾವು ಸ್ಥಳಾಂತರಿಸುತ್ತೇವೆ. ಆದರೆ ಅದಕ್ಕೆ ಸ್ಥಳೀಯಾಡಳಿತ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಬೇರಿದೇವರಕೊಪ್ಪದ ಸಾರ್ವಜನಿಕ ಸ್ಥಳದಲ್ಲಿರುವ ದರ್ಗಾದ 1 ಭಾಗ ಸೇರಿದಂತೆ ವಾಣಿಜ್ಯ ಕಟ್ಟಡಗಳ ತೆರವು ಕಾರ್ಯಾಚರಣೆ ಇಂದು ಬೆಳ್ಳಂಬೆಳಗ್ಗೆ ಆರಂಭವಾಗಿದೆ.

.

Leave a reply

Your email address will not be published. Required fields are marked *