Categories: News

ರಾಜ್ಯದ 42 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಕ್ರಮ: ಸಿಎಂ

ಬೆಳಗಾವಿ: ರಾಜ್ಯದಲ್ಲಿ ಸುಮಾರು 42 ಸಾವಿರ ಪೌರ ಕಾರ್ಮಿಕರಿದ್ದು, ಇವರ ಪೈಕಿ11,133 ಕಾರ್ಮಿಕರ ನೌಕರಿ ಖಾಯಂಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ರು.

ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಬಳಿಕ ಸಿಎಂ ಮಾತನಾಡಿದರು.

ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ :
ಆಯವ್ಯಯದಲ್ಲಿ 2000 ರೂ. ಸಂಕಷ್ಟ ಭತ್ಯೆಯನ್ನು ಪೌರಕಾರ್ಮಿಕರ ಹಿತರಕ್ಷಣೆಗೆ ನೀಡಲಾಯಿತು. ಪೌರಕಾರ್ಮಿಕರ ಹಿತರಕ್ಷಣೆಗಾಗಿ ಕಾನೂನು ಬದಲಾಯಿಸಿ, ಈ ತೀರ್ಮಾನ ಕೈಗೊಳ್ಳುವ ಮೂಲಕ ಕಾರ್ಮಿಕರಿಗೆ ನ್ಯಾಯ ಒದಗಿಸಲಾಗಿದೆ. ಅವರು ಗೌರವಯುತ ಜೀವನ ನಡೆಸುವ ಸಲುವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಈ ಜಿಲ್ಲೆಯಲ್ಲಿ 309 ಕ್ಲೀನರ್ ಗಳನ್ನು, 1,437 ಲೋಡರ್ಸ್ ಗಳನ್ನು ಖಾಯಂಗೊಳಿಸಲಾಗಿದೆ. ಇದೇ ರೀತಿ ಉಳಿದವರ ನೇಮಕಾತಿ ಪ್ರಕ್ರಿಯೆ ಕೈಕೊಳ್ಳಲಾಗುವುದು. ಅಲ್ಲಿಯವರೆಗೆ ಅವರ ಸೇವಾ ದರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ತೀರ್ಮಾನವನ್ನು ಸರ್ಕಾರ ಮಾಡಿದೆ ಎಂದರು.

ಪೌರ ಕಾರ್ಮಿಕರಲ್ಲ, ಪೌರ ನೌಕರರು
ಇಂತಹ ವಿಷಯದಲ್ಲಿಯೂ ರಾಜಕಾರಣ ಮಾಡಲಾಗುತ್ತದೆ. ನ್ಯಾಯ ಕೊಡುತ್ತಿರುವವರ ಮೇಲೆ ನಂಬಿಕೆಯಿಟ್ಟು ನಡೆದರೆ ಒಳ್ಳೆಯದಾಗುತ್ತದೆ. ಇನ್ನು ಮುಂದೆ ಪೌರ ಕಾರ್ಮಿಕರು ಎನ್ನದೇ, ಸರ್ಕಾರಿ ಪೌರ ನೌಕರರು ಎಂದು ಕರೆಯಲು ತೀರ್ಮಾನಿಸಲಾಗಿದೆ. ಈ ಹೆಸರು ನಿಮಗೆ ಸ್ವಾಭಿಮಾನ, ಅಸ್ಮಿತೆಯನ್ನು ನೀಡುತ್ತದೆ ಎಂದರು.

ಪೌರನೌಕಕರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ
ಯಾವುದೇ ಕಾರಣಕ್ಕೂ ಪೌರ ನೌಕರರ ಮಕ್ಕಳ ಶಿಕ್ಷಣಕ್ಕೆ ತಡೆಯುಂಟಾಗಬಾರದು. ಪೌರ ನೌಕರರ ಮಕ್ಕಳ ಶಿಕ್ಷಣಕ್ಕೆ ಯಾವುದೇ ಸಮಸ್ಯೆ ಬಂದರೂ ಸರ್ಕಾರ ಪರಿಹಾರ ಒದಗಿಸುತ್ತದೆ. ಅವರೂ ವಿದ್ಯಾವಂತರಾಗಿ ಎಲ್ಲರಂತೆಯೇ ಉನ್ನತ ಹುದ್ದೆಗಳಿಗೆ ಹೋಗಬೇಕು. ಈ ರೀತಿ ಸಾಮಾಜಿಕ ಬದಲಾವಣೆ ತರಲಾಗುತ್ತದೆ. ಎಸ್.ಸಿ.ಎಸ್.ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ.

ಈ ನಿರ್ಣಯಕ್ಕೆ ಗಟ್ಟಿಯಾಗಿ ನಿಲ್ಲಲು ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಪೌರ ನೌಕರರ ಸೇವೆಯನ್ನು ಸರ್ಕಾರ ಗುರುತಿಸಿದೆ. ಬರುವ ದಿನಗಳಲ್ಲಿ ಪೌರ ನೌಕರರ ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ, ಅವರ ಭವಿಷ್ಯ ಉಜ್ವಲಗೊಳಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಸಹಕಾರ ನೀಡುತ್ತದೆ ಎಂದರು.

ಪೌರ ನೌಕರರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ವಿಶೇಷ ತರಬೇತಿ

ಈ ವರ್ಷ ಮಾರ್ಚ್ ನಲ್ಲಿ ಪದವಿ ಪರೀಕ್ಷೆ ಬರೆಯುವ ಪೌರ ನೌಕರರ ಮಕ್ಕಳ ಸವಿವರ ಪಟ್ಟಿ ನೀಡಲು ಸಂಬಂಧಪಟ್ಟ ಸಚಿವರಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಎಸ್ಸಿ. ಎಸ್ಟಿ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿಯನ್ನು ನೀಡುವಂತೆ, ಪೌರ ನೌಕರರ ಮಕ್ಕಳು ಸಿಇಟಿ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ವಿಶೇಷ ತರಬೇತಿ ನೀಡಲು ಸರ್ಕಾರ ಸಿದ್ಧವಿದೆ ಎಂದರು.

ಪೌರಕಾರ್ಮಿಕರ ನೋವನ್ನು ನಾನು ಬಲ್ಲೆ

ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ನೀಡುವ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಇದರ ಬಗ್ಗೆ ಹಲವು ವರದಿಗಳು ಬಂದಿದ್ದರೂ ಬೇಡಿಕೆ ಈಡೇರಿರಲಿಲ್ಲ. ನಗರ ಸ್ವಚ್ಛತೆ ಮಾಡುವುದರ ಕಷ್ಟವನ್ನುಳ ನಾನು ಅರಿತಿದ್ದೇನೆ. ಯಾವ ವ್ಯಕ್ತಿ ಇನ್ನೊಬ್ಬರ ಸ್ವಚ್ಛತೆಯನ್ನೇ ನಿರ್ವಹಿಸುವ ಕೆಲಸವನ್ನು ಸತತವಾಗಿ ಮಾಡಿದಾಗ ಮಾನಸಿಕವಾಗಿ ಅನುಭವಿಸುವ ನೋವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ.

ಈ ಮಾನಸಿಕ ಹಿಂಸೆಯಿಂದ ಪಾರಾಗಲು ನಿಮ್ಮದೇ ಆದ ರೀತಿಗಳನ್ನು ಕಂಡುಕೊಂಡಿದ್ದೀರಿ. ನಿಮ್ಮ ಜಾಗದಲ್ಲಿ ನಿಂತು ಯೋಚಿಸಿದಾಗ, ಬದುಕಿಗಾಗಿ ನಾನು ಏಕೆ ಇನ್ನೊಬ್ಬರ ಹೊಲಸನ್ನು ಸ್ವಚ್ಛಗೊಳಿಸಬೇಕು ಎಂಬ ಮೂಲಭೂತ ಪ್ರಶ್ನೆ ಏಳುತ್ತದೆ. ಇಂತಹ ಬದುಕನ್ನು ಬದುಕುವ ಅನಿವಾರ್ಯತೆ ಏಕೆ ಬಂದಿದೆ. ರಾಜ್ಯದ ದಲಿತ ನಾಯಕ ಬಸವಲಿಂಗಪ್ಪ, ಮಲ ಹೊರುವ ಪದ್ಧತಿಯನ್ನು ನಿಷೇಧಿಸುವ ಕಾನೂನನ್ನು ತಂದ ಧೀಮಂತ ನಾಯಕ ಎಂದು ಹೋಗಳಿದ್ರು.

ಸರ್ಕಾರದ ದಿಟ್ಟ ನಿರ್ಧಾರಗಳು ಸಮಾಜದಲ್ಲಿ ಬದಲಾವಣೆ ತರುತ್ತದೆ

ನಾವು ಅಧಿಕಾರದಲ್ಲಿದ್ದಾಗ ಅತ್ಯಂತ ತಳಹಂತದಲ್ಲಿರುವವರಿಗೆ ನ್ಯಾಯ ಕೊಡಬೇಕು. ಕಾನೂನಿನ ಅಡಚಣೆ ಮುಂದಿಟ್ಟುಕೊಂಡು ಪೌರಕಾರ್ಮಿಕರಿಗೆ 40-50 ವರ್ಷಗಳಿಂದ ನ್ಯಾಯ ನೀಡಲಾಗಿರಲಿಲ್ಲ. ಸರ್ಕಾರದ ವ್ಯವಸ್ಥೆಯಲ್ಲಿ ಕೆಲಸ ಮಾಡಬಾರದೆಂದರೆ ನೂರಾರು ಕಾರಣಗಳನ್ನು ಹುಡುಕಬಹುದು.

ಆದರೆ ಬಡವರಿಗೆ, ದೀನದಲಿತರಿಗೆ,ದುಡಿಯುವ ವರ್ಗದ ಏಳಿಗೆಗೆ ದಿಟ್ಟತನದ ನಿರ್ಧಾರಗಳನ್ನು ತೆಗೆದುಕೊಂಡಾಗ ಸಮಾಜದಲ್ಲಿ ದೊಡ್ಡ ಬದಲಾವಣೆ ತರಬಹುದಾಗಿದೆ. ಸರ್ಕಾರದ ಆಶಯಕ್ಕೆ ಈ ನಿರ್ಣಯವೇ ಸಾಕ್ಷಿ. ಪೌರಕಾರ್ಮಿಕರ ಆರೋಗ್ಯ ರಕ್ಷಣೆ, ಮಕ್ಕಳ ಶಿಕ್ಷಣ, ಮನೆ ನಿರ್ಮಾಣಗಳಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದ್ದು, ಪೌರಕಾರ್ಮಿಕರು ಇವುಗಳ ಲಾಭ ಪಡೆಯಬೇಕು ಎಂದರು.

ಸಚಿವರಾದ ಗೋವಿಂದ ಕಾರಜೋಳ, ಎಂಟಿ ಬಿ ನಾಗರಾಜ್, ಶಶಿಕಲಾ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ ಉಪಸ್ಥಿತರಿದ್ದರು.

Jyoti Patil

Recent Posts

ರೈತನ ಬಾಳಲ್ಲಿ ಜೀವಜಲ ತುಂಬಿದ ರಿಂಗ್ ಮಾಸ್ಟರ್ ನರೇಗಾ

ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…

6 months ago

PMAY: ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಅರ್ಜಿ

PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…

2 years ago

ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…

2 years ago

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

2 years ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

3 years ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

3 years ago