ಬೆಂಗಳೂರು: ಪ್ರಥಮ ದರ್ಜೆಯಲ್ಲಿ ಪಾಸ್‌ ಆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು, ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

2021ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್‌ ಆದ ವಿವಿಧ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31, 2022 ರವರೆಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಈ ದಿನಾಂಕವನ್ನು 28-02-2023 ರವರೆಗೆ ವಿಸ್ತರಿಸಲಾಗಿದೆ.

ಇದು ಕೊನೆಯ ಅವಕಾಶವಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಆನ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ.

ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್‌ https://sw.kar.nic.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

ಪ್ರೋತ್ಸಾಹಧನದ ವಿವರ ಹೀಗಿದೆ

ಪದವಿ ವಿದ್ಯಾರ್ಥಿಗಳಿಗೆ – 25,000,

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ – 30,000
MA, Mcom etc… ಅಗ್ರಿಕಲ್ಚರ್, ಇಂಜಿನಿಯರ್, ವೆಟರ್ ನರಿ ಹಾಗೂ ಮೆಡಿಕಲ್ ವಿದ್ಯಾರ್ಥಿಗಳಿಗೆ – 35,000