Select Page

1ತಿಂಗಳ ಬೋಟ್ ಇಂಜಿನ್ ರಿಪೇರಿ ತರಬೇತಿ ಉಚಿತ: ಅರ್ಜಿ ಆಹ್ವಾನ

1ತಿಂಗಳ ಬೋಟ್ ಇಂಜಿನ್ ರಿಪೇರಿ ತರಬೇತಿ ಉಚಿತ: ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್, ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ 30 ದಿನಗಳ ಬೋಟ್ ಇಂಜಿನ್ ರಿಪೇರಿ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಜನವರಿ 15ರೊಳಗಾಗಿ ತಮ್ಮ ಹೆಸರು, ವಿಳಾಸವನ್ನು ನೊಂದಾಯಿಸಿಕೊಳ್ಳಬೇಕು. 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ, ಯುವತಿಯರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು.

ತರಬೇತಿಯೂ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಟೀಲ್ಸ್, ಯೋಗ ತರಬೇತಿ, ಬ್ಯಾಂಕಿಂಗ್ ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ವಿಳಾಸಕ್ಕೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ 9482188780, 9986020262 ಗೆ ಸಂಪರ್ಕಿಸಿ ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Leave a reply

Your email address will not be published. Required fields are marked *