ಉತ್ತರ ಕನ್ನಡ: ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮಲ್ಪೆಯಲ್ಲಿ ಮೂರು ಬೋಟ್  ಮುಳುಗಡೆಯಾಗಿವೆ.

ಶನಿವಾರ ರಾತ್ರಿಯಿಂದ ಭಾನುವಾರ ಬೆಳಗ್ಗಿನ ಅವಧಿಯಲ್ಲಿ ಈ ಘಟನೆ ನಡೆದಿದೆ ಎಂದು ಗೊತ್ತಾಗಿದೆ. ಬೋಟ್‌ನಲ್ಲಿದ್ದ ಮೀನುಗಾರರು ಕಲ್ಲು ಬಂಡೆ ಮೇಲೆ ಆಶ್ರಯ ಪಡೆದು ದಡ ಸೇರಿದ್ದಾರೆ. ಘಟನೆಯಿಂದ ಲಕ್ಷಾಂತರ ರೂ ನಷ್ಟ ಸಂಭವಿಸಿದ್ದು, ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಕರ್ನಾಟಕದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಎನ್ ಡಿಆರ್ ಎಫ್ ರಕ್ಷಣಾ ತಂಡಗಳನ್ನು ಕರೆಯಿಸಿಕೊಳ್ಳಲಾಗುತ್ತಿದೆ. ಬೋಟ್ ಗಳು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದೆ ಬಂದರಿನಲ್ಲಿಯೇ ಲಂಗರು ಹಾಕಿವೆ.