ಬಾಗಲಕೋಟೆ: ನಗರದ ಸ್ಥಳೀಯ ಸಂಸ್ಥೆಗಳಲ್ಲಿ ಅಗತ್ಯವಿರುವ 438 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಫೆಬ್ರುವರಿ 13 ರೊಳಗೆ ಅರ್ಜಿ ಸಲ್ಲಿಸಿಬಹುದು.

ಸಂಸ್ಥೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಮಂಜೂರಾಗಿರುವ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಹಾಗೂ ಆಕರ್ಷಕ ಸಂಬಳ ನೀಡಲಾಗುತ್ತದೆ. ಹುದ್ದೆಗಳ ಕುರಿತು ವಿವರ ಕೆಳಗಿನಂತಿದೆ.

‌ಒಟ್ಟು 438 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ₹17,000 ರಿಂದ 28,950 ರ ವರೆಗೆ ವೇತನ ನಿಗದಿಪಡಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ನಗರಸಭೆ, ಪುರಸಭೆ ‌ಅಥವಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅರ್ಜಿ ಸಲ್ಲಿಸಲು 13-02-2023 ‌‌ಕೊನೆ ದಿನಾಂಕವಾಗಿದೆ.

ಅರ್ಹತೆಗಳು.

ಯಾವುದೇ ಶೈಕ್ಷಣಿಕ ಅರ್ಹತೆ ಇರುವುದಿಲ್ಲ. ಆದ್ರೆ ಕನ್ನಡ ಮಾತನಾಡಲು ಗೊತ್ತಿರಬೇಕು. ವಯೋಮಿತಿ ಕನಿಷ್ಠ 18, ಗರಿಷ್ಠ ( 23-11-2022 ಕ್ಕೆ) 55 ವರ್ಷಗಳು ಮೀರಿರಬಾರದು.

ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಪೌರಕಾರ್ಮಿಕರ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೇರಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ, ಲೋಡರ್ ಅಥವಾ ಕ್ಲೀನರ್ ಹುದ್ದೆಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿರಬೇಕು.

ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ, ಅಂಚೆ ಮೂಲಕ, ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ಹೀಗಾಗಿ ‌‌ಮೀಸಲಾತಿ, ಜಾತಿ ಪ್ರಮಾಣ ಪತ್ರಗಳ ಜೆರಾಕ್ಸ್ ಕಾಫಿಗಳೊಂದಿಗೆ ನೇರವಾಗಿಯೇ ಹೋಗಿ ಅರ್ಜಿಯನ್ನು ಬಾಗಲಕೋಟೆ ಜಿಲ್ಲೆಯ ನಗರಸಭೆ, ಪುರಸಭೆ ಅಥವಾ ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲೇ ಸಲ್ಲಿಸಬೇಕು.