ತುಮಕೂರು ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಟು-ನಕಲುಗಾರ ಮತ್ತು ಜಾರಿಪೇದೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ
ಬೆರಳಚ್ಚುಗಾರ – 07
ಬೆರಳಚ್ಟು-ನಕಲುಗಾರ – 03
ಜಾರಿಪೇದೆ – 11

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19-03-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18-04-2020

ಗಮನಿಸಿ: ಮತ್ತಷ್ಟು ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ

ವೇತನ
ಬೆರಳಚ್ಚುಗಾರ, ಬೆರಳಚ್ಟು-ನಕಲುಗಾರ ಹುದ್ದೆಗಳಿಗೆ 21,000 ರೂ. ದಿಂದ 42000 ರೂ. ವರೆಗೆ ಮತ್ತು ಜಾರಿಪೇದೆ ಹುದ್ದೆಗೆ 19950 ರೂ. ದಿಂದ 37900 ರೂ. ವರೆಗೆ ವೇತನ ನೀಡಲಾಗುತ್ತದೆ.

ಗಮನಿಸಿ: ಮತ್ತಷ್ಟು ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ
-10 ನೇ ತರಗತಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.
-ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
– ಜಾರಿಪೇದೆ ಹುದ್ದೆಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಗಮನಿಸಿ: ಮತ್ತಷ್ಟು ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ

ವಯೋಮಿತಿ
ಅರ್ಜಿ ಸಲ್ಲಿಸುವ ಕೊನೆ ದಿನಾಂಕದೊಳಗೆ ಕನಿಷ್ಠ ವಯೋಮಿತಿ 18 ವರ್ಷ ಪೂರೈಸಿರಬೇಕು. ಗರಿಷ್ಠ 35 ವರ್ಷ ವಯೋಮಿತಿ ದಾಟಿರಬಾರದು. ಜಾತಿವಾರು ಮೀಸಲಾತಿ ನಿಯಮ ಅನ್ವಯವಾಗಲಿದೆ.

ಅರ್ಜಿ ಶುಲ್ಕ
– ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ರೂ.
– ಪ.ಜಾತಿ / ಪ.ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.
– ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಲು ಏಪ್ರಿಲ್‌ 18 ರವರೆಗೆ, ಚಲನ್‌ ಮೂಲಕ ಪಾವತಿಸಲು ಏಪ್ರಿಲ್ 21 ರವರೆಗೆ ಅವಕಾಶ.

ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಟೈಪಿಂಗ್ ಟೆಸ್ಟ್‌ ನೀಡಲಾಗುತ್ತದೆ. 5 ನಿಮಿಷಗಳ ಕಾಲ, ಒಂದು ನಿಮಿಷಕ್ಕೆ 120 ಪದಗಳಂತೆ ಟೈಪ್‌ ಮಾಡಬೇಕು. ಒಟ್ಟು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಅದರಲ್ಲಿ ಕನಿಷ್ಠ 50 ಅಂಕಗಳಿಸಬೇಕು.

ಆನ್ ಲೈನ್ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ
ನೇಮಕಾತಿ ಅದಿಸೂಚನೆಗೆ ಕ್ಲಿಕ್ ಮಾಡಿ

Leave a reply

Your email address will not be published. Required fields are marked *