ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ

ತೋಟಗಾರಿಕೆ ತರಬೇತಿ ಕೇಂದ್ರ, ಮುನಿರಾಬಾದ್ ಹಾಗೂ ಬಳ್ಳಾರಿ ಜಿಲ್ಲೆಯ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು 2020 ರ ಮೇ.2 ರಿಂದ 2021 ರ ಫೆ. 28 ರವರೆಗೆ ನಡೆಯಲಿದೆ. ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳಿಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದಿನ ಮಹಿಳಾ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಾಗೂ ಪುರುಷ ಅಭ್ಯರ್ಥಿಗಳಿಗೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಾಗುತ್ತದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 18 ರಿಂದ 33 ವರ್ಷ ವಯೋಮಿತಿ ಇರಬೇಕು. ಇತರೆ ವಿದ್ಯಾರ್ಥಿಗಳಿಗೆ 18 ರಿಂದ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಕನ್ನಡ ಓದಲು, ಬರೆಯಲು ಸ್ಪಷ್ಟವಾಗಿ ಬರಬೇಕು. ಈ ತರಬೇತಿ ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ/ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಸ್ವಂತ ಸಾಗುವಳಿ ಮಾಡುತ್ತಿರಬೇಕು. ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.
ಅರ್ಜಿಯನ್ನು ಮಾರ್ಚ್. 30 ರಿಂದ ಏ. 24 ರ ವರೆಗೆ ವಿತರಿಸಲಾಗುತ್ತದೆ. ಅಭ್ಯರ್ಥಿಗಳು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆಯಬಹುದು ಅಥವಾ ಇಲಾಖಾ ವೆಬ್ಸೈಟ್ www.horticulture.kar.nic.in ಮುಖಾಂತರ ಅರ್ಜಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಇದನ್ನೂ ಓದಿ: ಎರಡು ಗುಂಟೆಯಲ್ಲಿ ಲಕ್ಷ ರೂ. ಆದಾಯ ಕೊಡುವ ಹೂವು
ಟಗರು ಸಾಕಿ ತಿಂಗಳಿಗೆ ಲಕ್ಷ ರೂ. ಆದಾಯ ಗಳಿಸುವ ರೈತ
ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್. 24 ರೊಳಗೆ ಕಚೇರಿಗೆ ಸಲ್ಲಿಸಬೇಕು. ಏಪ್ರಿಲ್ 27 ರಂದು ಬೆಳಗ್ಗೆ 11 ಗಂಟೆಗೆ ಕೊಪ್ಪಳದ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಪ್ರತ್ಯೇಕ ಸಂದರ್ಶನ ಪತ್ರಗಳನ್ನು ಕಳುಹಿಸುವುದಿಲ್ಲ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳಾ ಅಭ್ಯರ್ಥಿಗಳು 7, ಪುರುಷ ಅಭ್ಯರ್ಥಿಗಳು 8 ಸೇರಿದಂತೆ ಒಟ್ಟು 15 ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುವುದು.

Nange kelsa madodahke thubha ase ede Sir onde problm ede enu adre nan s s l c pruksha Kattaedhene coran edda thodare agide aduke nana vichara tilihadag agide sir