Select Page

ಶಿರಸಿ ನಗರಸಭೆ ಸೀಲ್ ಡೌನ್

ಶಿರಸಿ ನಗರಸಭೆ ಸೀಲ್ ಡೌನ್

ಶಿರಸಿ:  ಇಲ್ಲಿಯ ನಗರಸಭೆಯ 13 ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಗರಸಭೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಕೊರೊನಾ ಶಂಕೆಯ ಹಿನ್ನೆಲೆಯಲ್ಲಿ ನಗರಸಭೆಯ ಸಿಬ್ಬಂದಿಯ ಗಂಟು ಮಾದರಿ ಸಂಗ್ರಹಿಸಲಾಗಿತ್ತು. ಬುಧವಾರ ವರದಿ ಬಂದಿದ್ದು, ನಗರಸಭೆಯ 13 ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದೆ. ಹಾಗಾಗಿ ನಗರಸಭೆಯ ಇಡೀ ಕಚೇರಿಗೆ ಬೀಗ ಹಾಕಿ ಸೀಲ್ ಡೌನ್ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರ 294  ಮಂದಿಗೆ  ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. 136 ಜನ ಬಿಡುಗಡೆಯಾಗಿದ್ದಾರೆ. ನಾಲ್ವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 87  ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.

1 Comment

Leave a reply

Your email address will not be published. Required fields are marked *