Select Page

ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನ

ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನ

ಉತ್ತರ ಕನ್ನಡ: ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಕೆಲ ದಿನಗಳ ಹಿಂದೆ ದೆಹಲಿಯ ಏಮ್ಸ್ ನಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ನಿಧನರಾಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸುರೇಶ ಅಂಗಡಿ ಅವರು ರೈಲ್ವೆ ರಾಜ್ಯ ಸಚಿವರಾದ ಬಳಿಕ ಅಂಕೋಲಾ- ಹುಬ್ಬಳ್ಳಿ ರೈಲ್ವೆ ಯೋಜನೆ ಜಾರಿ ವಿಚಾರದಲ್ಲಿ ಸಾಕಷ್ಟು ಉತ್ಸಾಹ ತೋರಿದ್ದರು. ಕೇಂದ್ರ ಮಟ್ಟದಲ್ಲಿ ರಾಜ್ಯದ ಪಾಲಿಗೂ ಪ್ರಭಾವಿ ವ್ಯಕ್ತಿಯಾಗಿದ್ದರು.

Leave a reply

Your email address will not be published. Required fields are marked *