Select Page

ಎನ್.ಎಚ್.ಎಂ. ಯೋಜನೆಯಡಿ ರೈತರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ಎನ್.ಎಚ್.ಎಂ. ಯೋಜನೆಯಡಿ ರೈತರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯಿಂದ 2021-22ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್.ಹೆಚ್.ಎಂ.) ಯೋಜನೆಯಡಿ ಅರ್ಹ ರೈತರಿಗೆ ವಿವಿಧ ಸೌಲಭ್ಯ ನೀಡಲಾಗುತ್ತಿದೆ.

ಇದಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬಹುದು.

ಈ ಯೋಜನೆಯಡಿ ಕೃಷಿ ಪ್ರದೇಶ ವಿಸ್ತರಣೆ, ವೈಯಕ್ತಿಕ ಕೃಷಿ ಹೊಂಡ, ಸಾಮೂಹಿಕ ಕೃಷಿ ಹೊಂಡ, ಯಾಂತ್ರೀಕರಣ, ಪಾಲಿಹೌಸ್, ಒಣದ್ರಾಕ್ಷಿ ಘಟಕ, ತಳ್ಳುವ ಗಾಡಿ, ಈರುಳ್ಳಿ ಶೇಖರಣಾ ಘಟಕ ಹಾಗೂ ಅರಿಶಿಣ ಸಂಸ್ಕರಣಾ ಘಟಕಗಳಿಗೆ ಸಹಾಯಧನ ನೀಡಲಾಗುತ್ತದೆ.

ಈ ಸೌಲಭ್ಯಕ್ಕಾಗಿ ಆಸಕ್ತ ರೈತರು 2021ರ ಆಗಸ್ಟ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸಬಹುದು ಎಂದು ಕಲಬುರಗಿ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trackbacks/Pingbacks

  1. ವಸತಿ ಯೋಜನೆಯಡಿ ಮನೆ ಪಡೆಯಲು ಅರ್ಜಿ ಆಹ್ವಾನ | - […] ಇದನ್ನು ಓದಿ: ಎನ್.ಎಚ್.ಎಂ. ಯೋಜನೆಯಡಿ ರೈತರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ […]

Leave a reply

Your email address will not be published. Required fields are marked *