
ಪಂಚಭಾಷಾ ನಿಪುಣರು ಸಿದ್ದೇಶ್ವರ ಶ್ರೀಗಳು…

ವಿಜಯಪುರ: ಸಿದ್ದೇಶ್ವರ ಶ್ರೀಗಳು ಕನ್ನಡ, ಸಂಸ್ಕೃತ, ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ನಿಪುಣರಾಗಿದ್ದರು.
ಶ್ರೀಗಳ ಶೈಕ್ಷಣಿಕ ವಿವರ ಹೀಗಿದೆ...
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿ 4ನೇ ತರಗತಿ ವರೆಗೆ ಓದಿದ ನಂತರ ಸಿದ್ದೇಶ್ವರ ಶ್ರೀಗಳು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. ‘ಬೆಳೆಯುವ ಪೈರು ಮೊಳಕೆಯಲ್ಲೇ’ ಎಂಬಂತೆ ಬಾಲಕ ಸಿದ್ದೇಶ್ವರ ಶ್ರೀಗಳ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು, ಸಿದ್ದೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ-ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು.
ಕರ್ನಾಟಕ ವಿಶ್ವವಿದ್ಯಾಯದಲ್ಲಿ ಬಿಎ ಪದವಿ ಪಡೆದು ಬಳಿಕ, ಕೊಲ್ಹಾಪುರ ವಿಶ್ವವಿದ್ಯಾಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದರು. ಸಿದ್ದೇಶ್ವರ ಶ್ರೀಗಳು ಅಪಾರ ಜ್ಞಾನವುಳ್ಳವರಾಗಿದ್ದು, ಉತ್ತಮ ವಾಗ್ಮಿಗಳು ಆಗಿದ್ದರು.