
ಮೈಸೂರಿನ AIISHನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರಿನಲ್ಲಿರುವ ಕೇಂದ್ರ ಸರಕಾರದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಸ್ಪೀಚ್ ಆ್ಯಂಡ್ ಹಿಯರಿಂಗ್‌ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನಿಸಿದ್ದ ಅರ್ಜಿ ಅವಧಿ ವಿಸ್ತರಿಸಲಾಗಿದೆ.
ಕಿರಿಯ ಸಹಾಯಕ ಪ್ರಾಧ್ಯಾಪಕ, ಹಾಸ್ಟೆಲ್ ಅಧೀಕ್ಷಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಫೆ.10 ಅರ್ಜಿ ಸಲ್ಲಿಸಲು ಕೊನೆ ದಿನವಾಗಿತ್ತು. ಅದನ್ನು ಈಗ ಫೆ.28ರವರೆಗೆ ವಿಸ್ತರಿಸಲಾಗಿದೆ. ಆ ದಿನ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬಹುದು.
ಯಾವುದೇ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ:
ದಿನಾಂಕ ವಿಸ್ತರಣೆ ಆದೇಶ:
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ