ಸದ್ಯದಲ್ಲಿಯೇ ಕೃಷಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸ್ಟಾರ್ಟ್ ಅಪ್ ಆರಂಭವಾಗಲಿದ್ದು, ರೈತರ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಕೃಷಿ ಉತ್ಪನ್ನಗಳಿಗೆ ವ್ಯಾಪಕ ಬೇಡಿಕೆ ಸಿಗಲಿದೆ. ಜತೆಯಲ್ಲಿಯೇ ಕೃಷಿಯಲ್ಲಿನ ನವೀನ ತಂತ್ರಜ್ಞಾನ ಹೊಸ ಅಧ್ಯಾಯವನ್ನೇ ಸೃಷ್ಟಿಸಲಿದೆ.

ಸ್ವತಃ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರೇ ಇಂಥದ್ದೊಂದು ಸುದ್ದಿಯನ್ನು ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿ ಅವರ ಸರ್ಕಾರದ ಬಳಿಕ ದೇಶದಲ್ಲಿ ಸ್ಟಾರ್ಟಪ್ ಗಳ ಯುಗ ಆರಂಭವಾಗಿದೆ. 2018ರ ಹೊತ್ತಿಗೆ ದೇಶದಲ್ಲಿ 50 ಸಾವಿರ ನವೋದ್ಯಮಗಳು ಆರಂಭವಾಗಿವೆ. ಅದರಲ್ಲಿ 474 ಕೃಷಿ ಉದ್ಯಮಗಳೇ ಆರಂಭವಾಗಿವೆ.

ಈಗ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕ್ಷೇತ್ರಕ್ಕೆ ನವಚೈತನ್ಯ ಒದಗಿಸಲು ಕೃಷಿ ಸ್ಟಾರ್ಟಪ್ ಗಳನ್ನು ಆರಂಭಿಸಿ ರೈತರು ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ವೇದಿಕೆ ಸೃಷ್ಟಿಸಲಾಗಿದೆ.

ಬೆಂಗಳೂರಿನಲ್ಲಿ ನಾಲ್ಕು ಸಾವಿರ ಸ್ಟಾರ್ಟಪ್ ಗಳನ್ನು ಆರಂಭಿಸಲಾಗುತ್ತಿದೆ. ದೇಶದ ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಸೇರಿ ವಾರ್ಷಿಕವಾಗಿ ನಾಲ್ಕು ಸಾವಿರ ನವೋದ್ಯಮ ಸೃಷ್ಟಿಸಲು ಅನುಕೂಲವಾಗಿದೆ.

ಸ್ಟಾರ್ಟಪ್ ಗಳು ಯುವಕರಿಗೆ 1.7 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ. ಭಾರತದಲ್ಲಿ ಕೃಷಿ ನವೋದ್ಯಮ ಪ್ರಾರಂಭದ ಹಂತದಲ್ಲಿಯೇ  ಆಕರ್ಷಿತವಾಗಿರುವುದು ಹೆಮ್ಮೆಯ ವಿಚಾರ. ಅಂಕಿಅಂಶಗಳ ಪ್ರಕಾರ ಪ್ರತಿದಿನ 2 ರಿಂದ 3 ಸ್ಟಾರ್ಟಪ್ ಗಳು ಭಾರತದಲ್ಲಿ ಸ್ಥಾಪನೆಯಾಗುತ್ತಿವೆ.

ಅಕ್ಸೆಂಚರ್ ಕಂಪನಿಯು ಮಾಡಿದ ಸಮೀಕ್ಷೆಯ ಅಂದಾಜಿನ ಪ್ರಕಾರ, ನಮ್ಮ ದೇಶದಲ್ಲಿ ಅಗ್ರಿ ಸ್ಟಾರ್ಟ್ಅಪ್‌ಗಳಿಂದ 4.5 ಬಿಲಿಯನ್ ಡಾಲರ್ ಮಾರುಕಟ್ಟೆಯ ಸೃಷ್ಟಿ ಆಗಲಿದೆ ಎಂದು ಅಂದಾಜಿಸಲಾಗಿದೆ.

ಸ್ಟಾರ್ಟಪ್  ವ್ಯವಸ್ಥೆಗಳನ್ನು ಹೊಂದಿರುವ ವಿಶ್ವದ 20 ಅಗ್ರ ದೇಶಗಳಲ್ಲಿ ಬೆಂಗಳೂರು 15 ನೇ ಸ್ಥಾನವನ್ನು ಪಡೆದುಕೊಂಡಿದೆ. ಅಲ್ಲದೇ ಏಷ್ಯಾ ಖಂಡದಲ್ಲಿ ಸಿಂಗಾಪೂರ್ ಬಳಿಕ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಸಹ  ಬೆಂಗಳೂರು ಗುರುತಿಸಲ್ಪಟ್ಟಿದೆ.

ಓದಿ: ಬೆಳೆ ನುಂಗುವ ಶಂಕು ಹುಳು ನಿಯಂತ್ರಿಸುವ ಕ್ರಮಗಳು

ಕರ್ನಾಟಕ ರಾಜ್ಯ ಜೈವಿಕ ಹಾಗೂ ಸಿರಿಧಾನ್ಯಗಳ ಹಬ್ ಎಂದು ಕರೆಯಲ್ಪಟ್ಟಿದೆ.  ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯವನ್ನು ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದಾಗಿ ಕೃಷಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ.

ಓದಿ: ಕಾಫಿ, ಅಡಿಕೆ, ಮೆಣಸು, ಏಲಕ್ಕಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ : ಕೇಂದ್ರಕ್ಕೆ ಪ್ರಸ್ತಾವ

ರಾಜ್ಯದಲ್ಲಿ ಜೀವರ್ಗಿ, ಹಿರಿಯೂರು, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಈಗಾಗಲೇ ಮೆಗಾಫುಡ್ ಪಾರ್ಕ್ ಗಳಿದ್ದು, ಕೇಂದ್ರ ಸರ್ಕಾರದಡಿ ಕೆ.ಆರ್.ಪೇಟೆ ಹಾಗೂ ತುಮಕೂರಿನಲ್ಲಿಯೂ ಮೆಗಾಫುಡ್ ಪಾರ್ಕ್ ಆರಂಭಿಸಲಾಗಿದೆ.

ಓದಿ: ಸೂರ್ಯಕಾಂತಿ ಬೆಳೆಯಲ್ಲಿ ರೋಗ ಕಂಡರೆ ತಕ್ಷಣವೇ ಹೀಗೆ ಮಾಡಿ

ಆ ಮೂಲಕ ಕೃಷಿ ಉತ್ಪಾದನಾ, ಆಹಾರ ಉತ್ಪಾದನಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಆದ್ಯತೆ ಕಲ್ಪಿಸಲಾಗಿದೆ. ಆತ್ಮ ನಿರ್ಭರ್ ಯೋಜನೆಯಡಿ ಆಹಾರ ಉತ್ಪಾದನಾ ಕೈಗಾರಿಕೆಗಳಿಗೆ ಅನುಕೂಲ ಕಲ್ಪಿಸಲಾಗಿದೆ.

ಓದಿ: ಯೂರಿಯಾ ಬಳಸುವ ಮುನ್ನ ಎಚ್ಚರ: ತಜ್ಞರು ಕೊಟ್ಟ ಸಲಹೆ ಏನು?

ಕೊರೊನಾ  ವೈರಸ್‌ ಬಿಕ್ಕಟ್ಟಿನ ಅವಧಿಯಲ್ಲಿ ರೈತರು ಬೆಳೆದ ತರಕಾರಿ ಹಣ್ಣು ಸೇರಿದಂತೆ ಕೃಷಿ ಫಸಲುಗಳು ನಾಶವಾಗದಂತೆ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ  ಕೋಲ್ಡ್ ಸ್ಟೋರೇಜ್ ಗಳನ್ನು ಆರಂಭಿಸಲಾಗಿದೆ ಎಂದು ವಿಕಾಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ “ಕೃಷಿ ನವೋದ್ಯಮ” (ಅಗ್ರಿ ಸ್ಟಾರ್ಟಪ್) ಸಮ್ಮೇಳನದಲ್ಲಿ ಸಚಿವರು ತಿಳಿಸಿದ್ದಾರೆ.