Select Page

ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಧನ ಸಹಾಯ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆ ಮೂಲಕ ರೈತರು ತಮ್ಮ ಹೊಲಗಳಿಗೆ ಹನಿ ನೀರಾವರಿ ವ್ಯವಸ್ಥೆ ಮಾಡಿಕೊಳ್ಳಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಸರಿಯಾದ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯಕ್ಕೆ ಅರ್ಹರಾಗಬಹುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ತಾಲೂಕಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375 249093 (ಹಾವೇರಿ) ಸಂಪರ್ಕಿಸಲು ಕೋರಲಾಗಿದೆ.

ಕೃಷಿ ಇಲಾಖೆ ವಿವಿಧ ಯೋಜನೆಗಳ ಬಗ್ಗೆ ತಿಳಿಯಲು ಇಲ್ಲಿ ಒತ್ತಿ

Leave a reply

Your email address will not be published. Required fields are marked *