ರೈತ, ರೈತ ಮಹಿಳೆಯರಿಂದ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ (ತನ್ನ ಆಡಳಿತದ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ) ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಿದೆ.
ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಚೇರಿ, ವಿಸ್ತರಣಾ ನಿರ್ದೇಶಕರ ಕಚೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ-ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ) ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ-ಮೈಸೂರು)ದಲ್ಲಿ ದೊರೆಯುತ್ತದೆ.
ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್ಸೈಟ್ನಲ್ಲೂ (www.uasbangalore.edu.in) ಲಭ್ಯವಿರುತ್ತದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಅಕ್ಟೋಬರ್-2020ರಲ್ಲಿ ಆಯೋಜಿಸಲಿರುವ ಕೃಷಿಮೇಳ-2020ರ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 20-07-2020 ಆಗಿದೆ. ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560 065 ಇವರನ್ನು ದೂರವಾಣಿ ಸಂಖ್ಯೆ. 080-23330153, ವಿಸ್ತರಣೆ: 401 ಮೂಲಕ ಸಂಪರ್ಕಿಸಬಹುದು.
ಪ್ರಶಸ್ತಿಗಳ ವಿವರ:
ಅ) ರಾಜ್ಯ ಮಟ್ಟದ ಪ್ರಶಸ್ತಿಗಳು
1. ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ.
2. ದಿವಂಗತ ಶ್ರೀ ಸಿ. ಭೈರೇಗೌಡ ರಾಜ್ಯ ಮಟ್ಟದ ರೈತ/ರೈತಮಹಿಳೆ ಪ್ರಶಸ್ತಿ.
3. ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ.
4. ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ/ರೈತಮಹಿಳೆ ಪ್ರಶಸ್ತಿ.
5. ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ.
6. ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಹಾಗೂ ರೈತಮಹಿಳೆ ಪ್ರಶಸ್ತಿ.
ಆ) ಜಿಲ್ಲಾ ಮಟ್ಟದ ಪ್ರಶಸ್ತಿಗಳು
1. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ.
2. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ.
ಇ) ತಾಲ್ಲೂಕು ಮಟ್ಟದ ಪ್ರಶಸ್ತಿಗಳು.
1. ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ.
2. ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ.
ಮಾಹಿತಿ: ವಾರ್ತಾ ಇಲಾಖೆ
