ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ವಿವಿಧ ಪ್ರಶಸ್ತಿಗಳಿಗೆ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಮತ್ತು ರಾಜ್ಯ ಮಟ್ಟದ ಶ್ರೇಷ್ಠ ಕೃಷಿ ಪ್ರಶಸ್ತಿಗೆ ಅರ್ಜಿ ಕರೆಯಲಾಗಿದೆ.
ವಿವಿಧ ಕೃಷಿ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ಸಾಮಾನ್ಯ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತ ಹಾಗೂ ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕೊನೆಯ ದಿನ ಜುಲೈ 20 ಆಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರ, ಕೃಷಿ ಅಧಿಕಾರಿಗಳನ್ನು, ಹಾಗೂ ಉಪ ಕೃಷಿ ನಿರ್ದೇಶಕರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬಾಗಲಕೋಟೆ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
