Select Page

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು  ವಿದ್ಯುಚ್ಛಕ್ತಿ ಲೋಕಪಾಲರ (Electricity Ombudsman) ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 80,000 ರೂ. ವೇತನ ನೀಡಲಾಗುತ್ತದೆ. ವಿದ್ಯುಚ್ಛಕ್ತಿ ಲೋಕಪಾಲರನ್ನು ಪ್ರಾಥಮಿಕವಾಗಿ ಒಂದು ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ.

ಗಮನಿಸಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ
– ಅಂಗೀಕೃತ ವಿವಿಗಳಿಂದ ಪದವಿ ಪೂರ್ಣಗೊಳಿಸಿರಬೇಕು.
– 25 ವರ್ಷ ಫೈನಾನ್ಸ್‌, ಕಾನೂನು, ಆಡಳಿತ, ವಿದ್ಯುತ್ ಪೂರೈಕೆ ದಾರರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.
– ಕನ್ನಡ ಭಾಷಾ ಜ್ಞಾನದೊಂದಿಗೆ ಕೆಲಸ ನಿರ್ವಹಿಸಿರಬೇಕು.
– 65 ವರ್ಷ ಗರಿಷ್ಠ ವಯೋಮಿತಿ ಮೀರಿರಬಾರದು.

ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಕೆಇಆರ್‌ಸಿ ಅಧಿಸೂಚನೆ ಪ್ರಕಟಣೆಯಲ್ಲಿ ನೀಡಿರುವ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ಅನುಭವ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಈ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : ನಿರ್ದೇಶಕರು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ, ಮಿಲ್ಲರ್ ಟ್ಯಾಂಕ್ ಬೆಡ್ ಏರಿಯ ವಸಂತನಗರ-560052.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-03-2020

ಅಧಿಸೂಚನೆ ಕ್ಲಿಕ್ ಮಾಡಿ

Leave a reply

Your email address will not be published. Required fields are marked *