ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೌಕರರ ಸಹಕಾರ ಸಂಘ ನಿಯಮಿತದಲ್ಲಿ ವಿವಿಧ ಹುದ್ದೆಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಪಿಯುಸಿ ಓದಿದವರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ
ವ್ಯವಸ್ಥಾಪಕರು- 1
ಹಿರಿಯ ಸಹಾಯಕರು- 1
ಕಿರಿಯ ಸಹಾಯಕ- 1
ಸಹಾಯಕ ಅಟೆಂಡರ್‌- 1

ಗಮನಿಸಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: 
-ವ್ಯವಸ್ಥಾಪಕ ಹುದ್ದೆಗೆ ಬಿಕಾಂ, ಎಂಕಾಂ ಓದಿರಬೇಕು.
-ಹಿರಿಯ ಸಹಾಯಕ ಹುದ್ದೆಗೆ ಪದವಿ ಓದಿರಬೇಕು.
-ಕಿರಿಯ ಸಹಾಯಕ ಹುದ್ದೆಗೆ ದ್ವಿತೀಯ ಪಿಯುಸಿ ಪಾಸಾಗಿರಬೇಕು.

-ಮೂರು ಹುದ್ದೆಗಳಿಗೂ ಕಂಪ್ಯೂಟರ್‌ ಜ್ಞಾನ ಕಡ್ಡಾಯ.
-ಸಹಾಯಕ ಅಟೆಂಡರ್‌ ಹುದ್ದೆಗೆ ಹತ್ತನೇ ತರಗತಿ ವಿದ್ಯಾರ್ಹತೆ ಬಯಸಲಾಗಿದೆ.

ವಯೋಮಿತಿ: 
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಒಬಿಸಿಗೆ 38 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿಗೆ ಒಂದು ಸಾವಿರ ರೂ. ಶುಲ್ಕ ನಿಗದಿ ಮಾಡಲಾಗಿದೆ. ಮಾರ್ಚ್ 27ರೊಳಗೆ ಅರ್ಜಿ ಪಡೆದು ಸಲ್ಲಿಸಬೇಕು. ಪ್ರತಿದಿನ ಸಂಘದ ಕಚೇರಿ ವೇಳೆಯಲ್ಲಿ ಬೆಳಗ್ಗೆ 10:30ರಿಂದ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಮಾಹಿತಿಗೆ ದೂರವಾಣಿ ಸಂಖ್ಯೆ 080-22271342 ಸಂಪರ್ಕಿಸಬಹುದು.