ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ ನಿರುದ್ಯೋಗ ಯುವಕ/ ಯುವತಿಯರಿಗಾಗಿ ಜುಲೈ ತಿಂಗಳಲ್ಲಿ 30 ದಿನಗಳ ಜು.1 ರಿಂದ 30ರ ವರೆಗೆ ಮೋಟಾರ್ ರಿವೈಂಡಿAಗ್, ದುರಸ್ತಿ ಮತ್ತು ಸೇವೆಗಳು ಹಾಗೂ ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತು ಜು.15 ರಿಂದ ಆ.16ರ ವೆರೆಗೆ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಭಾಗವಹಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು, ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿದ್ದು, ಬಿಪಿಎಲ್/ ಅಮತ್ಯೋದಯ/ ಪಿಎಚ್‌ಎಚ್/ ನರೇಗಾ ಯೋಜನೆಯಡಿಯಲ್ಲಿ ಜಾಬ್ ಕಾರ್ಡ್ನ್ನು ಹೊಂದಿರಬೇಕು.

ತರಬೇತಿ ಸಮಯದಲ್ಲಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ನೀಡಲಾಗುತ್ತದೆ. ತರಬೇತಿಯಲ್ಲಿ ತಾಂತ್ರಿಕ ತರಬೇತಿ ಯೊಂದಿಗೆ ಉದ್ಯಮಶೀಲತಾ ತರಬೇತಿಯನ್ನು ನೀಡಲಾಗುತ್ತದೆ. ಸರ್ಕಾರದ ಸಾಲ ಸೌಲಭ್ಯಗಳು, ಸಬ್ಸಡಿ, ಬ್ಯಾಂಕಿನಿAದ ಸ್ವ-ಉದ್ಯೋಗವನ್ನು ಮಾಡಲು ನೀಡಲಾಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ತರಬೇತಿ ಕೊನೆಯಲ್ಲಿ ಭಾರತ ಸರ್ಕಾರದಿಂದ ಮಾನ್ಯತೆಯನ್ನು ಪಡೆದ ಪ್ರಮಾಣ ಪತ್ರ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿದೇರ್ಶಕರು, ರುಡ್ ಸೆಟ್ ಸಂಸ್ಥೆ, ಅರಶಿನಕುಂಟೆ, ನೆಲಮಂಗಲ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ-562123 ಮೊ. ಸಂ: 9241482541, 8104554510, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a reply

Your email address will not be published. Required fields are marked *