
ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ ನಿರುದ್ಯೋಗ ಯುವಕ/ ಯುವತಿಯರಿಗಾಗಿ ಜುಲೈ ತಿಂಗಳಲ್ಲಿ 30 ದಿನಗಳ ಜು.1 ರಿಂದ 30ರ ವರೆಗೆ ಮೋಟಾರ್ ರಿವೈಂಡಿAಗ್, ದುರಸ್ತಿ ಮತ್ತು ಸೇವೆಗಳು ಹಾಗೂ ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತು ಜು.15 ರಿಂದ ಆ.16ರ ವೆರೆಗೆ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಭಾಗವಹಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು, ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿದ್ದು, ಬಿಪಿಎಲ್/ ಅಮತ್ಯೋದಯ/ ಪಿಎಚ್‌ಎಚ್/ ನರೇಗಾ ಯೋಜನೆಯಡಿಯಲ್ಲಿ ಜಾಬ್ ಕಾರ್ಡ್ನ್ನು ಹೊಂದಿರಬೇಕು.
ತರಬೇತಿ ಸಮಯದಲ್ಲಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ನೀಡಲಾಗುತ್ತದೆ. ತರಬೇತಿಯಲ್ಲಿ ತಾಂತ್ರಿಕ ತರಬೇತಿ ಯೊಂದಿಗೆ ಉದ್ಯಮಶೀಲತಾ ತರಬೇತಿಯನ್ನು ನೀಡಲಾಗುತ್ತದೆ. ಸರ್ಕಾರದ ಸಾಲ ಸೌಲಭ್ಯಗಳು, ಸಬ್ಸಡಿ, ಬ್ಯಾಂಕಿನಿAದ ಸ್ವ-ಉದ್ಯೋಗವನ್ನು ಮಾಡಲು ನೀಡಲಾಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ತರಬೇತಿ ಕೊನೆಯಲ್ಲಿ ಭಾರತ ಸರ್ಕಾರದಿಂದ ಮಾನ್ಯತೆಯನ್ನು ಪಡೆದ ಪ್ರಮಾಣ ಪತ್ರ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿದೇರ್ಶಕರು, ರುಡ್ ಸೆಟ್ ಸಂಸ್ಥೆ, ಅರಶಿನಕುಂಟೆ, ನೆಲಮಂಗಲ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ-562123 ಮೊ. ಸಂ: 9241482541, 8104554510, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…
PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…
ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…
ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…
ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಲವು ವಿಧದ ಔಷಧೀಯ ಗುಣಗಳೂ ಇದರಲ್ಲಿ ಕಂಡುಬರುತ್ತವೆ. ಆಹಾರದ ರುಚಿಯನ್ನು…