ಸಂಚಾರ ನಿಯಮ ಉಲ್ಲಂಘಿಸಿದರೆ ವಾಹನ ಸವಾರರಿಗೆ ಸ್ಥಳದಲ್ಲಿಯೇ ದಂಡ ವಿಧಿಸುವುದನ್ನು ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ರದ್ದು ಮಾಡಿದ್ದಾರೆ ಎನ್ನುವ ಸುದ್ದಿ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ದಂಡ ವಿಧಿಸುವ ಯಂತ್ರಗಳನ್ನು ವಾಪಸ್ ಠಾಣೆಗೆ ಹಾಜರುಪಡಿಸಲು ಸಚಿವರು ಹೇಳಿದ್ದಾರೆ ಎಂದು ಸುದ್ದಿಯಾಗಿದ್ದವು. ಆದರೆ, ಅದೆಲ್ಲ ಸುಳ್ಳು ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.

ದಂಡ ವಿಧಿಸುವ ಪಿಡಿಎ ಯಂತ್ರಗಳನ್ನು ವಾಪಸ್ ಪಡೆಯುವಂತೆ ಸಚಿವರು ಹೇಳಿಲ್ಲ. ರಸ್ತೆಯಲ್ಲಿ ದಂಡ ವಿಧಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾಗಿ ಟಿವಿ, ಪತ್ರಿಕೆಗಳಲ್ಲಿ ಬಂದಿರುವ ಸುದ್ದಿ ಸುಳ್ಳು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ನಿರ್ದೇಶಕ ಡಾ. ಬಿ.ಆರ್. ರವಿಕಾಂತೇಗೌಡ ಅವರು ಪ್ರಕಟಣೆ ಹೊರಡಿಸಿದ್ದಾರೆ.

ದಂಡ ವಿಧಿಸುವ ಪಿಡಿಎ ಉಪಕರಣಗಳನ್ನು ವಾಪಸ್ಸು ಪಡೆದಿರುವುದಾಗಿ ಮತ್ತು ಯಾವುದೇ ಸಂಚಾರ ನಿಯಮ ಉಲ್ಲಂಘನೆಗಳನ್ನು ದಾಖಲಿಸಬಾರದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾಗಿ ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿವೆ.

ಇಂಥ ಯಾವುದೇ ಸೂಚನೆಯನ್ನು ನೀಡಿರುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳು ಜಂಟಿ ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.