ಅಕ್ರಮ ಮರಳು ಸಾಗಣೆ ತಡೆಯಲು ಹೋದ ಅರಣ್ಯ ಪಾಲಕನ ಮೇಲೆ ಮಾರಣಾಂತಿಕ ಹಲ್ಲೆ
ದಾಂಡೇಲಿ: ಅಕ್ರಮ ಮರಳು ಸಾಗಣೆ ತಡೆಯಲು ಹೋದ ಅರಣ್ಯ ಇಲಾಖೆ ನೌಕರನ ಮೇಲೆಯೇ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ದಾಂಡೇಲಿ ಸಮೀಪದ ವಿರ್ನೋಲಿಯಲ್ಲಿ ಈ ಘಟನೆ ನಡೆದಿದೆ. ಸಂದೀಪ ಗೌಡ ಎಂಬುವವರ ಮೇಲೆ ಹಲ್ಲೆಯಾಗಿದೆ. ಹಲ್ಲೆ ನಡೆಸಿದವರು ಪರಾರಿಯಾಗಿದ್ದಾರೆ.
ಸಂದೀಪ ಅವರ ತಲೆ ಮತ್ತಿತರ ಭಾಗದಲ್ಲಿ ಗಾಯಗಳಾಗಿವೆ. ಸದ್ಯ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಾರಿಯಾದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.
