ಕರ್ನಾಟಕ ವಾರ್ತೆ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಮತ್ತು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನ ಗಂಗಾಕಲ್ಯಾಣ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗಳಿಗೆ ಒಂದು ಕೊಳವೆಬಾವಿ ಕೊರೆಯಿಸಿ, ಪಂಪ್‍ಸೆಟ್, ಉಪಕರಣಗಳನ್ನು ಸರಬರಾಜುಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ

ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ ಕಾಡುಗೊಲ್ಲ, ಹಟ್ಟಿಗೊಲ್ಲ ಅಲೆಮಾರಿ ಮತ್ತು ಅರೆಅಲೆಮಾರಿ ಜಾಂಗಗಳು, ಒಕ್ಕಲಿ, ಲಿಂಗಾಯತ, ಮರಾಠಿ, ರೆಡ್ಡಿ ಮತ್ತು ಇದರ ಉಪ ಸಮುದಾಗಳು ಹೊರತುಪಡಿಸಿ) ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗಳಿಗೆ ಒಂದು ಕೊಳವೆಬಾವಿ ಕೊರೆಯಿಸಿ, ಪಂಪ್‍ಸೆಟ್, ಉಪಕರಣಗಳನ್ನು ಸರಬರಾಜುಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ನಿಗಧಿತ ಅರ್ಜಿ ನಮೂನೆಯನ್ನು ನಿಗಮದ ವೆಬ್‍ಸೈಟ್ www.dbcdc.karnataka.gov.in ನಲ್ಲಿ ಪಡೆದು ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 7-03-2022ರೊಳಗಾಗಿ ಸಲ್ಲಿಸಬೇಕು.

ಮಲೆನಾಡು ಪ್ರದೇಶಗಳಲ್ಲಿ ವೈಯಕ್ತಿಕ ಕೊಳವೆಬಾವಿ ಘಟಕ ವೆಚ್ಚದಲ್ಲಿ ತೆರೆದ ಬಾವಿ, ಭೂ ಮಟ್ಟದಲ್ಲಿ ದೊರೆಯುವ ನದಿ ಮತ್ತು ಜಲಾಶಯಗಳ ನೀರಾವರಿ ಸಂಪನ್ಮೂಲಗಳಿಂದ ಏತ ನೀರಾವರಿ ಮೂಲಕ ನೀರಾವರಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು www.dbcdc.karnataka.gov.inಸಂಪರ್ಕಿಸಿ, ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 07-03-2022ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ www.dbcdc.karnataka.gov.in ಸಂಪರ್ಕಿಸಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರ ಮಕ್ಕಳ ಶಿಷ್ಯವೇತನ: ಪಡೆಯುವುದು ಹೇಗೆ? ಪೂರ್ಣ ವಿವರ ಇಲ್ಲಿದೆ

ಉಪ್ಪಾರ ಸಮುದಾಯದವರಿಂದ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನ ಗಂಗಾಕಲ್ಯಾಣ ಯೋಜನೆ ಸೌಲಭ್ಯಕ್ಕೆ ಉಪ್ಪಾರ ಮತ್ತು ಇತರ ಉಪಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪ್ಪಾರ, ಬೆಲ್ದರ್, ಚುನಾರ್, ಗಾವಾಡಿ, ಗೌಂದಿ, ಕಲ್ಲುಕುಟಿಗ, ಉಪ್ಪಾರ, ಲೋನಾರಿ, ಮೇಲುಸಕ್ಕರೆಯವರು, ಮೇಲುಸಕ್ಕರೆ, ನಾಮದುಪ್ಪಾರ, ಪಡಿತ್/ಪಡ್ತಿ, ಪಡಿತಿ, ವಾಡಿ, ಸಗರ, ಸುಣ್ಣಗಾರ, ಸುಣ್ಣಉಪ್ಪಾರ, ಉಪ್ಪಳಿಗ, ಉಪ್ಪಳಿಗಶೆಟ್ಟಿ, ಉಪ್ಪಳಿಯನ್, ಉಪ್ಪೇರ, ಯಕಲಾರ, ಎಕ್ಕಲಿಗ ಜಾತಿಗೆ ಸೇರಿದವರಾಗಿರಬೇಕು. 18 ರಿಂದ 55 ವರ್ಷದೊಳಗಿನವರಾಗಿರಬೇಕು.

ಕನಿಷ್ಠ ಎರಡು ಎಕರೆ ಹಾಗೂ ಗರಿಷ್ಠ ಐದು ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದ ಸಣ್ಣ ಮತ್ತು ಅತಿಸಣ್ಣ ರೈತರಾಗಿರಬೇಕು. ವಾರ್ಷಿಕ ಆದಾಯ ರೂ.98 ಸಾವಿರದೊಳಗಿರಬೇಕು. ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹೊಂದಿರಬೇಕು.

ಉಚಿತ ವಿದ್ಯುತ್ ಸಂಪರ್ಕ “ಬೆಳಕು” ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಸೌಲಭ್ಯ ಪಡೆದಿದ್ದಲ್ಲಿ ಅಂತವರು ಹಾಗೂ ಕುಟುಂಬದವರು ಮೊತ್ತಮ್ಮೆ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿವುದಿಲ್ಲ.
ಅರ್ಜಿ ನಮೂನೆಯನ್ನು ನಿಗಮದ ವೆಬ್‍ಸೈಟ್ https://uppardevelopment.gov.in ನಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ 10-3-2022ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಅಥವಾ ನಿಗಮದ ವೆಬ್‍ಸೈಟ್ https://uppardevelopment.gov.in ಸಂಪರ್ಕಿಸಬಹುದೆಂದು ನಿಗದಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯಾನೋ ಯೂರಿಯಾ ಬಳಸುವುದು ಹೇಗೆ ಗೊತ್ತೇ?

ಜೇನು ಕೃಷಿ ಮಾಡುವುದು ಎಷ್ಟು ಸುಲಭ ಗೊತ್ತಾ?