
ವಿದ್ಯಾರ್ಥಿಗಳಿಗೆ ಗೂಗಲ್‌ನಿಂದ 1000 ಡಾಲರ್ ಸ್ಕಾಲರ್‌ಶಿಪ್

ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ. ಕಂಪ್ಯೂಟರ್ ಸೈನ್ಸ್ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಗೂಗಲ್ ಸಂಸ್ಥೆ ಯುಎಸ್‌ಡಿ 1000 ಡಾಲರ್ (73 ಸಾವಿರ ರೂ.) ಸ್ಕಾಲರ್‌ಶಿಪ್ ಘೋಷಣೆ ಮಾಡಿದೆ. ಈ ಸ್ಕಾಲರ್‌ಶಿಪ್ 2021-2022 ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಜನರೇಶನ್ ಗೂಗಲ್ ಸ್ಕಾಲರ್‌ಶಿಪ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಹಣ ನೀಡಲಾಗುತ್ತದೆ.
ವಿದ್ಯಾರ್ಥಿಗಳಲ್ಲಿನ ನಾಯಕತ್ವ, ಕ್ರೀಯಾಶೀಲತೆ, ಶೈಕ್ಷಣಿಕ ಕಾರ್ಯಕ್ಷಮತೆ ಆಧಾರದ ಮೇಲೆ ಸ್ಕಾಲರ್‌ಶಿಪ್‌ಗೆ ಆಯ್ಕೆ ಮಾಡಲಾಗುತ್ತದೆ. ಯುವತಿಯರು ಕಂಪ್ಯೂಟರ್ ಸೈನ್ಸ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯಬೇಕು ಎನ್ನುವ ಕಾರಣಕ್ಕೆ ಈ ಸ್ಕಾಲರ್‌ಶಿಪ್ ನೀಡಲಾಗುತ್ತದೆ. ಆಸಕ್ತ ವಿದ್ಯಾರ್ಥಿನಿಯರು ಗೂಗಲ್ ಮಾನದಂಡಗಳನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲುವ ವಿದ್ಯಾರ್ಥಿನಿಯರು 2021-2022 ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಭಾರತ, ತೈವಾನ್, ಉತ್ತರ ಏಷಿಯಾ ರಾಷ್ಟçಗಳು, ಬಾಂಗ್ಲಾದೇಶ, ಕಾಂಬೋಡಿಯಾ, ಇಂಡೋನೇಶಿಯಾ, ಮಲೆಶಿಯಾ, ಮಂಗೋಲಿಯಾ, ಮಯನ್ಮಾರ್, ನೇಪಾಳ, ಪಾಕಿಸ್ತಾನ್, ಫಿಲಿಪೈನ್ಸ್, ಸಿಂಗಾಪುರ, ಶ್ರೀಲಂಕಾ, ಥೈಲ್ಯಾಂಡ್ ಸೇರಿದಂತೆ ವಿವಿಧ ರಾಷ್ಟçಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ವರ್ಷ, ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಒತ್ತಿ ಅರ್ಜಿ ಸಲ್ಲಿಸಬಹುದು.