ಕರ್ನಾಟಕ ವಾರ್ತೆ: 2022-23ನೇ ಸಾಲಿನ ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಾಗಲಕೋಟ ಜಿಲ್ಲೆಯ ರೈತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 10 ಜನರಿಗೆ ಬೆಳಗಾವಿ ಜಿಲ್ಲೆಯ ಹಿಡಕಲ್ ಡ್ಯಾಂ ತರಬೇತಿ ಕೇಂದ್ರದಲ್ಲಿ ಮೇ 2, 2022 ರಿಂದ ಫೆಬ್ರವರಿ 28, 2023 ವರೆಗೆ 10 ತಿಂಗಳ ತಿಂಗಳ ತೋಟಗಾರಿಕೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ರೈತರ ಪರುಷ, ಮಹಿಳಾ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಅರ್ಜಿಗಳನ್ನು ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ, ಬಾಗಲಕೋಟ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಬಾಗಲಕೋಟರವರ ಕಛೇರಿಗಳಲ್ಲಿ ಇಲ್ಲವೇ ವೆಬ್‍ಸೈಟ https://www.horticulturedir.karnataka.gov.in ನಿಂದ ಡೌನಲೋಡ ಮಾಡಿಕೋಳ್ಳಬಹುದಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನ ಏಪ್ರೀಲ್ 16 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊನಂ.9845896489 ಸಂಪರ್ಕಿಸುವಂತೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.