
ತೋಟಗಾರಿಕೆ ಇಲಾಖೆ ಸಬ್ಸಿಡಿ ಯೋಜನೆಗಳು

ಮುಂಗಾರು ಆರಂಭವಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದರಿಂದ ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ರೈತರಿಗಾಗಿ ಹಲವು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತರಲಾಗಿದೆ.
ಆ ಯೋಜನೆಗಳ ವಿವರವನ್ನು ಇಲ್ಲಿ ನೀಡಲಾಗಿದೆ. ರೈತರು ತಮ್ಮ ಸಮೀಪದ ತೋಟಗಾರಿಕೆ ಇಲಾಖೆ ಕಚೇರಿ ಅಧಿಕಾರಿಗಳನ್ನು ಸಂಪರ್ಕಿಸಿ ಈ ಕೆಳಗಿನ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.
ಅಣಬೆ ಕೃಷಿ:
ಅಣಬೆ ಕೃಷಿಯನ್ನು ಉತ್ತೇಜಿಸಲು ಅಣಬೆ ಉತ್ಪಾದನಾ ಘಟಕಗಳನ್ನು ಖಾಸಗಿ ವಲಯದಲ್ಲಿ ಸ್ಥಾಪಿಸಲು ಒಟ್ಟು ವೆಚ್ಚದ ಶೇ. 40ರಷ್ಟು ಅಂದರೆ, ಗರಿಷ್ಠ 8 ಲಕ್ಷ ರೂ. ಗಳವರೆಗೆ ಸಹಾಯಧನ ನೀಡಲು ಅವಕಾಶವಿದೆ.
ಓದಲು ಲಿಂಕ್ ಒತ್ತಿ: ಎರಡು ಗುಂಟೆಯಲ್ಲಿ ಲಕ್ಷ ರೂ. ಆದಾಯ ಕೊಡುವ ಹೂ
ನೀರಿನ ಮೂಲಗಳ ನಿರ್ಮಾಣ:
ಕ್ಲಿಷ್ಟಕರ ಪರಿಸ್ಥಿತಿಗಳಲ್ಲಿ ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ವೈಯಕ್ತಿಕ ಫಲಾನುಭವಿಗಳಿಗೆ 20ಮೀ*20ಮೀ*3ಮೀ ವಿಸ್ತೀರ್ಣದ ಕೃಷಿ ಹೊಂಡಗಳ ನಿರ್ಮಾಣಕ್ಕೆ ಒಟ್ಟು ವೆಚ್ಚದ ಶೇ 50 ಗರಿಷ್ಠ 75 ಸಾವಿರ ರೂ.ವರೆಗೆ ಸಹಾಯಧನ ನೀಡಲು ಅವಕಾಶವಿದೆ.
ಓದಲು ಲಿಂಕ್ ಒತ್ತಿ: ತೆಂಗು ಕೃಷಿಯಲ್ಲಿ ಬಂಪರ್ ಆದಾಯ ಗಳಿಸಲು ಸರಳ ಸೂತ್ರಗಳು
ಸಂರಕ್ಷಿತ ಬೇಸಾಯ:
ಸಂರಕ್ಷಿತ ಬೇಸಾಯ ಪದ್ಧತಿಗಳನ್ನು ಅಳವಡಿಸಿ ಉತ್ಕೃಷ್ಠ ಗುಣಮಟ್ಟದ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ವಿವಿಧ ವಿನ್ಯಾಸಗಳ ಗರಿಷ್ಠ 4 ಸಾವಿರ ಚ.ಮೀ. ಹಸಿರುಮನೆ ಘಟಕಗಳ ನಿರ್ಮಾಣಕ್ಕಾಗಿ ಶೇ. 50 ರಂತೆ ಗರಿಷ್ಠ 447 ರೂ. ಪ್ರತಿ ಚ.ಮೀ ವರೆಗೆ ಸಹಾಯಧನ ನೀಡಲು ಅವಕಾಶವಿದೆ.
ಓದಲು ಲಿಂಕ್ ಒತ್ತಿ: ಟಗರು ಸಾಕಿ ತಿಂಗಳಿಗೆ ಲಕ್ಷ ರೂ. ಆದಾಯ ಗಳಿಸುವ ರೈತ
ಸಮಗ್ರ ಪೋಷಕಾಂಶ, ಕೀಟ/ ರೋಗಗಳ ನಿರ್ವಹಣೆ:
ತೋಟಗಾರಿಕೆ ಬೆಳೆಗಳಿಗಾಗಿ ಸಮಗ್ರ ಪೋಷಕಾಂಶ ಹಾಗೂ ಕೀಟ/ ರೋಗಗಳ ನಿರ್ವಹಣೆಗೆ ಅಗತ್ಯವಾದ ಪರಿಕರಗಳನ್ನು ಖರೀದಿಸಿದ ರೈತರಿಗೆ ಶೇ. 30 ರಂತೆ ಪ್ರತಿ ಹೆಕ್ಟೇರ್‍ಗೆ 1,200 ರೂ. ರಂತೆ ಗರಿಷ್ಠ 4 ಹೆಕ್ಟೇರ್ ಪ್ರದೇಶಕ್ಕೆ 4,800 ರೂ. ಗಳವರೆಗೆ ಸಹಾಯಧನ ನೀಡಲು ಅವಕಾಶವಿದೆ.
ಓದಲು ಲಿಂಕ್ ಒತ್ತಿ: ಹಾಲು, ಹಣ್ಣಿಗಿಂತ ಶ್ರೇಷ್ಠ ನುಗ್ಗೆ ಸೊಪ್ಪು: ಆದಾಯ ಬೆಳೆ
ಜೇನು ಸಾಕಾಣಿಕೆಯಿಂದ ಪರಾಗಸ್ಪರ್ಶ ಅಭಿವೃದ್ಧಿ:
ತೋಟಗಾರಿಕೆ ಬೆಳೆಗಳಲ್ಲಿ ಪರಾಗಸ್ಪರ್ಶವನ್ನು ಹೆಚ್ಚಿಸಲು ಜೇನು ಕಾಲೋನಿ, ಜೇನು ಪೆಟ್ಟಿಗೆ ಹಾಗೂ ಜೇನುಗಾರಿಕೆಗೆ ಅಗತ್ಯವಿರುವ ಜೇನು ಸಲಕರಣೆಗಳನ್ನು ಖರೀದಿಸಲು ರೈತರಿಗೆ ಶೇ 40 ರಂತೆ 1600 ರೂ. ಜೇನು ಕಾಲೋನಿ ಮತ್ತು ಜೇನು ಪೆಟ್ಟಿಗೆ ಹಾಗೂ ಜೇನು ಸಲಕರಣೆಗೆ 8 ಸಾವಿರ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ.
ಓದಲು ಲಿಂಕ್ ಒತ್ತಿ: ಗುಲಾಬಿ ಕೃಷಿಯ ಪ್ಲ್ಯಾನಿಂಗ್: ವರ್ಷಕ್ಕೆ ಲಕ್ಷಾಂತರ ರೂ. ಆದಾಯ
ತೋಟಗಾರಿಕೆಯಲ್ಲಿ ಯಾಂತ್ರೀಕರಣ:
ತೋಟಗಾರಿಕೆ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರ ಕೊರತೆ ನಿವಾರಿಸಿ, ಕಡಿಮೆ ಸಮಯದಲ್ಲಿ ಹೆಚ್ಚಿನ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯವಾದ ಕೃಷಿ ಉಪಕರಣಗಳು, ಸ್ವಯಂ ಚಾಲಿತ ಯಂತ್ರೋಪಕರಣಗಳು, 20 ಹೆಚ್.ಪಿ.ಗಿಂತ ಕಡಿಮೆ ಸಾಮರ್ಥ್ಯದ ಟ್ರ್ಯಾಕ್ಟರ್ ಹಾಗೂ ಪವರ್ ಟಿಲ್ಲರ್‍ಗಳನ್ನು ಖರೀದಿಸಲು ರೈತರಿಗೆ ಗರಿಷ್ಠ 75 ಸಾವಿರ ರೂ. ವರೆಗೆ ಸಹಾಯಧನ ನೀಡಲು ಅವಕಾಶವಿದೆ.
ಓದಲು ಲಿಂಕ್ ಒತ್ತಿ: ಖರ್ಚಿಲ್ಲದೆ ಹೊಲದಲ್ಲಿ ಬಾವಿ, ಗೊಬ್ಬರ ಗುಂಡಿ, ಬದು ನಿರ್ಮಿಸಿ
ಕೊಯ್ಲೋತ್ತರ ನಿರ್ವಹಣೆ:
ಹಣ್ಣು, ತರಕಾರಿ ಹಾಗೂ ಹೂವಿನ ಬೆಳೆಗಳು ಬಹುಬೇಗನೆ ಹಾಳಾಗುವ ಉತ್ಪನ್ನಗಳಾಗಿದ್ದು, ಇವುಗಳ ಸಮರ್ಪಕ ನಿರ್ವಹಣೆಗಾಗಿ ವಿವಿಧ ಮೂಲಭೂತ ಸೌಕರ್ಯಗಳನ್ನು ಸ್ಥಾಪಿಸಿ ತೋಟಗಾರಿಕೆ ಉತ್ಪನ್ನಗಳ ನಿರ್ವಹಣೆ, ವಿಂಗಡಣೆ, ಶೇಖರಣೆ ಮತ್ತು ಮೌಲ್ಯವರ್ಧನೆ ಮಾಡುವುದರೊಂದಿಗೆ ಉತ್ತಮ ಮಾರುಕಟ್ಟೆಯನ್ನು ಒದಗಿಸಲು ರೈತರು ತಮ್ಮ ಜಮೀನಿನಲ್ಲಿ ಪ್ಯಾಕ್‍ಹೌಸ್ ನಿರ್ಮಾಣ ಮಾಡಲು ಪ್ರತಿ ಘಟಕಕ್ಕೆ ಗರಿಷ್ಠ 2 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ.
ಓದಲು ಲಿಂಕ್ ಒತ್ತಿ: ರಾಗಿಯ ಇತಿಹಾಸ ಬಲ್ಲಿರೇನು? ತಿಳಿದರೆ ಬೆರಗಾಗುತ್ತೀರಿ
ಮಾರುಕಟ್ಟೆಗಳಲ್ಲಿ ಮೂಲಸೌಕರ್ಯಗಳ ಸ್ಥಾಪನೆ:
ರೈತರು ಬೆಳೆದ ತೋಟಗಾರಿಕೆ ಉತ್ಪನ್ನಗಳಿಗೆ ಸೂಕ್ತ ರೀತಿಯ ಮಾರಾಟದ ವ್ಯವಸ್ಥೆ ಕಲ್ಪಿಸಿ, ಉತ್ತಮ ಬೆಲೆ ದೊರಕಿಸಿಕೊಡಲು ಅಗತ್ಯವಾದ ವಿವಿಧ ಮಾದರಿಯ ಗ್ರಾಮೀಣ ಮಾರುಕಟ್ಟೆ ನಿರ್ಮಾಣಕ್ಕಾಗಿ ಶೇ.40 ರಂತೆ ಗರಿಷ್ಠ 10 ಲಕ್ಷ ರೂ.ಗಳ ಸಹಾಯಧನ ನೀಡಲಾಗುತ್ತದೆ.
ಓದಲು ಲಿಂಕ್ ಒತ್ತಿ: ಕಾಳು ಮೆಣಸು ಅಧಿಕ ಇಳುವರಿಯ ಗುಟ್ಟು; ಇಲ್ಲಿವೆ ಸೂಪರ್ ತಳಿಗಳು
ತೋಟಗಾರಿಕೆ ಉತ್ಪನ್ನಗಳನ್ನು ಮಾರಾಟ ಮಾಡಲು ಉಪಯುಕ್ತವಾದ ಸ್ಥಿರ ಅಥವಾ ಚರ ತಳ್ಳು ಮಾರಾಟ ಗಾಡಿಗಳ ಖರೀದಿಗೆ ಶೇ. 50 ರಂತೆ ಗರಿಷ್ಠ 15 ಸಾವಿರ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ.
me from moodbidri, wer to contact
Join my number in a site or group page