ಕರ್ನಾಟಕ ವಾರ್ತೆ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ಫೆಬ್ರುವರಿ ಮಾಹೆಯಲ್ಲಿ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಉಚಿತ ತರಬೇತಿ ಆಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ -ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಊಟ-ವಸತಿಯೊಂದಿಗೆ ತರಬೇತಿ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. 18 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸದ ಅರ್ಜಿಯನ್ನು ದಿನಾಂಕ 22-01-2022ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ದೂ. 08284-295307,2208087 ಹಾಗೂ ಮೊ.9483485489, 9482188780, 9632225123 ಸಂಪರ್ಕಿಸಲು ಕೋರಲಾಗಿದೆ.