ಕೋವಿಡ್ 19 ಕೊರೊನಾ ವೈರಸ್ ನಿಂದ ದೇಶದಾದ್ಯಂತ ಲಾಕ್ ಡೌನ್ ಜಾರಿಯಾಗಿರುವುದರಿಂದ ಕರ್ನಾಟಕ ಸರ್ಕಾರದ ವಿವಿಧ ಹುದ್ದೆಗಳ ನೇಮಕಾಗಿ ಅರ್ಜಿ ಸಲ್ಲಿಕೆ ಅವಧಿಗಳನ್ನು ವಿಸ್ತರಣೆ ಮಾಡಲಾಗಿದೆ. ಉದ್ಯೋಗ ಆಕಾಂಕ್ಷಿಗಳು ಮನೆಯಲ್ಲಿ ಇದ್ದುಕೊಂಡೇ ಈಗಲೂ ಅರ್ಜಿ ಸಲ್ಲಿಸಬಹುದು. ಅವೆಲ್ಲವುಗಳ ವಿವರ ಇಲ್ಲಿದೆ.

ಎಸ್‌ಡಿಎ ಹುದ್ದೆ ನೇಮಕಾತಿ
ಕರ್ನಾಟಕ ಲೋಕಸೇವಾ ಆಯೋಗವು 2019-20ನೇ ಸಾಲಿನ ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಉಳಿಕೆ ಮೂಲ ವೃಂದದ ಮತ್ತು ಹೈದೆರಾಬಾದ್ ಕರ್ನಾಟಕ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಆನ್‌ಲೈನ್‌ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಿದೆ.

ಕೆಪಿಎಸ್‌ಸಿಯು 1279 ದ್ವಿತೀಯ ದರ್ಜೆ ಸಹಾಯಕರನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿತ್ತು. ಏಪ್ರಿಲ್ 14 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕೊರೊನಾ ಎಫೆಕ್ಟ್ ನಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದರಿಂದ ವಂಚಿತರಾಗದಿರಲು, ದಿನಾಂಕ ವಿಸ್ತರಣೆ ಮಾಡಲಾಗಿದೆ. ಏಪ್ರಿಲ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ತಿಳಿಸಿದೆ.

ಪರಿಷ್ಕೃತ ವೇಳಾಪಟ್ಟಿ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-04-2020
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 02-05-2020

ಓದಿ: ಎಸ್ ಡಿಎ ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ, ವೇತನ ಎಷ್ಟು?

ಕರ್ನಾಟಕ ಅರಣ್ಯ ರಕ್ಷಕ ಹುದ್ದೆ
ಕರ್ನಾಟಕ ಅರಣ್ಯ ಇಲಾಖೆಯು, 339 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಿದೆ. ಈ ಬಗ್ಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆ ದಿನಾಂಕವಾಗಿತ್ತು. ಏಪ್ರಿಲ್ 17 ರವರೆಗೆ ಅರ್ಜಿ ಶುಲ್ಕ ಪಾವತಿಸಲು ದಿನಾಂಕ ನಿಗಧಿಪಡಿಸಿತ್ತು. ಈಗ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15 ರ ವರೆಗೆ ವಿಸ್ತರಿಸಲಾಗಿದೆ. ಮೇ 18 ರ ವರೆಗೆ ಅರ್ಜಿ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದೆ.

ಪರಿಷ್ಕೃತ ವೇಳಾಪಟ್ಟಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-05-2020
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 18-05-2020

ಓದಿ: ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ, ವೇತನ ಎಷ್ಟು?

Job Cornar Click hear