ಕರ್ನಾಟಕ ವಾರ್ತೆ: ಕರ್ನಾಟಕ ಸರಕಾರದಿಂದ ವಿವಿಧ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಯಾ ಸಮುದಾಯದ ಜನರು ನಿಗದಿತ ನಿಗಮ ಮಂಡಳಿ ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದಿ ನಿಗಮ:

ಪ್ರಸಕ್ತ ಸಾಲಿಗೆ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮೂದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂರ್ತಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮಿನುಗಾರರು ವಸತಿ ರಹಿತ ನಿವೇಶನ ಹೊಂದಿದ ಫಲಾನುಭವಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ (ವಸತಿ) ನಿರ್ಮಾಣ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ಆಯಾ ಜಿಲ್ಲಾ ಕಚೇರಿಗಳಲ್ಲಿ 2021/22 ನೇ ಸಾಲಿನ ನಿಗದಿಪಡಿಸುವ ಗುರಿಗನುಗುಣವಾಗಿ ನಿಯಮಗಳನ್ವಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಆಫ್‌ಲೈನ್ ಅರ್ಜಿಕೆಗೆ ಕೊನೆ ದಿನ ಫೆಬ್ರವರಿ 25, ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಫೆಬ್ರವರಿ 28 ಆಗಿರುತ್ತದೆ ಎಂದು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗದಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 08354-235016ಗೆ ಸಂಪರ್ಕಿಸಬಹುದಾಗಿದೆ.

ಇದನ್ನು ಓದಿ: ಎನ್.ಎಚ್.ಎಂ. ಯೋಜನೆಯಡಿ ರೈತರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮ:

ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ , ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ನಿವೇಶನವಿರುವ ವಸತಿ ರಹಿತ ಅಭ್ಯರ್ಥಿಗಳಿಂದ ಆನ್‌ಲೈನ್ ಹಾಗೂ ಆಫ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವೆಬ್‌ಸೈಟ್ https://www.adcl.karnataka.gov.in/ ಮೂಲಕ ಅಥವಾ ವೆಬ್‌ಸೈಟ್‌ನಲ್ಲಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಅಥವಾ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.

ಇದನ್ನು ಓದಿ: ತಾಡಪತ್ರಿ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 28-02-2022ರೊಳಗಾಗಿ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮ ಕಚೇರಿಗೆ ಸಲ್ಲಿಸಬೇಕು ಎಂದು ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಉಚಿತ ವಿದ್ಯುತ್ ಸಂಪರ್ಕ “ಬೆಳಕು” ಸೌಲಭ್ಯಕ್ಕೆ ಅರ್ಜಿ ಆಹ್ವಾನ