ಕೆಪಿಎಸ್ ಸಿ: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳು ಮುಂದಕ್ಕೆ

ಕೆಪಿಎಸ್ ಸಿ: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳು ಮುಂದಕ್ಕೆ

ಕರ್ನಾಟಕ ಲೋಕಸೇವಾ ಆಯೋಗವು 2019-20 ನೇ ಸಾಲಿನಲ್ಲಿ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ವಿವಿಧ ಹುದ್ದೆಗಳ ನೇಮಕಾತಿಗೆ ಇತ್ತೀಚೆಗೆ ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೇ ಮತ್ತು ಜೂನ್ ನಲ್ಲಿ ನೇಮಕಾತಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಸದ್ಯ ಕೋವಿಡ್ 19 ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿದ್ದ ಪರೀಕ್ಷಾ ದಿನಾಂಕಗಳನ್ನು ಮುಂದೂಡಲಾಗಿದೆ.

ನೇಮಕಾತಿ ಮುಂದೂಡಲಾದ ಹುದ್ದೆಗಳು
ವಿವಿಧ ಇಲಾಖೆಗಳಲ್ಲಿನ ಸಹಾಯಕರು, ಪ್ರಥಮ ದರ್ಜೆ ಸಹಾಯಕ ಹುದ್ದೆಗಳು.
ಅಧಿಸೂಚನೆ ದಿನಾಂಕ: 31-1-2020.
ಗೆಜೆಟ್ ಪ್ರೊಬೇಷನರ್ಸ್ ಗ್ರೂಪ್ “ಎ’ ಮತ್ತು “ಬಿ’  ವೃಂದದ ಒಟ್ಟು 106 ಹುದ್ದೆಗಳು.
ಅಧಿಸೂಚನೆ ದಿನಾಂಕ: 31-1-2020.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಕರು 54 ಹುದ್ದೆಗಳು.
ಅಧಿಸೂಚನೆ ದಿನಾಂಕ: 31-1-2020.
ರಾಜ್ಯದ ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು.
ಅಧಿಸೂಚನೆ ದಿನಾಂಕ: 29-2-2020.

ಕೆಪಿಎಸ್ ಸಿ 1279 ಎಸ್ ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ

ಲಾಕ್ ಡೌನ್ ಮುಗಿದ ನಂತರ ಪರೀಕ್ಷಾ ದಿನಾಂಕಗಳನ್ನು ನಿಗದಿಪಡಿಸಿ ಮಾಹಿತಿ ಪ್ರಕಟಿಸಲಾಗುವುದು ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಆಯೋಗದ ಪ್ರಕಟಣೆ ಪ್ರತಿ Click Hear

Leave a reply

Your email address will not be published. Required fields are marked *