ಕರ್ನಾಟಕ ಲೋಕಸೇವಾ ಆಯೋಗವು 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ 106 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ದಿನಾಂಕವನ್ನು 7 ದಿನಗಳ ಕಾಲ ವಿಸ್ತರಣೆ ಮಾಡಿದೆ.
ನೇಮಕಾತಿ ಸಂಬಂಧ ಜನವರಿ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. 06-03-2020 ರಂದು ಅರ್ಜಿ ಸಲ್ಲಿಸಲು ಕೊನೆ ದಿನಾಂಕ ನಿಗದಿಪಡಿಸಲಾಗಿತ್ತು. ಈಗ ಸರ್ಕಾರದ ಆದೇಶದಂತೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 33 ಎಸ್‌ಆರ್‌ಆರ್‌ 2020, ದಿನಾಂಕ 03-03-2020 ಮತ್ತು 05-03-2020 ರ ಪತ್ರಗಳಲ್ಲಿ ನಿರ್ದೇಶಿಸಿರುವಂತೆ, 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳಿಗೆ ಆಯೋಗವು 2017-18 ನೇ ಸಾಲಿನ ಹುದ್ದೆಗಳಿಗೆ ಪರೀಕ್ಷೆ ಬರೆಯಲು ವಯೋಮಿತಿಯ ನಿರ್ಬಂಧ ಇಲ್ಲದೆ ಒಂದು ವಿಶೇಷ ಅವಕಾಶವನ್ನು ನೀಡಿರುತ್ತದೆ.

ಗಮನಿಸಿ: ಮತ್ತಷ್ಟು ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ

ಈ ಹಿನ್ನೆಲೆಯಲ್ಲಿ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳಿಗೆ ಸೀಮಿತಗೊಂಡಂತೆ ಮಾತ್ರ ಅರ್ಜಿ ಸಲ್ಲಿಸಲು 7 ದಿನಗಳ ಹೆಚ್ಚುವರಿ ಅವಧಿಯನ್ನು ನೀಡಿದೆ.
ಅಂದರೆ, ದಿನಾಂಕ 09-03-2020 ರಿಂದ 16-03-2020 ರ ರಾತ್ರಿ 11-45 ಗಂಟೆವರೆಗೆ ನಿಗದಿಪಡಿಸಿದೆ. ಶುಲ್ಕ ಪಾವತಿಸಲು 17-03-2020  ಕೊನೆ ದಿನಾಂಕವಾಗಿ ವಿಸ್ತರಿಸಿದೆ.

ಗಮನಿಸಿ: ಮತ್ತಷ್ಟು ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ
– ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

ಅರ್ಜಿ ಸಲ್ಲಿಕೆ ಹೇಗೆ?
– ಕೆಪಿಎಸ್‌ಸಿ ವೆಬ್‌ಸೈಟ್‌ www.kpsc.kar.nic.in ಗೆ ಭೇಟಿ ನೀಡಿ.
– ಒಟ್ಟು ಮೂರು ಹಂತದಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ., ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ದಿನಾಂಕ ವಿಸ್ತರಣೆ ಆದೇಶ ಪ್ರತಿ Click hear

ಅರ್ಜಿ ಸಲ್ಲಿಸಿ www.kpsc.kar.nic.in

ಗಮನಿಸಿ: ಮತ್ತಷ್ಟು ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ