
ಕಾರವಾರ: ಲಿಂಗನಮಕ್ಕಿ ಜಲಾಶಯ ಭರ್ತಿಯಾಗುವ ಹಂತಕ್ಕೆ ಬಂದಿದ್ದು ಶರಾವತಿ ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ.
ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುವ ಸಾಧ್ಯತೆ ಇದೆ. ಹಾಗಾಗಿ ನದಿ ತೀರದಲ್ಲಿರುವವರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೆಪಿಸಿಎಲ್ (ಕರ್ನಾಟಕ ವಿದ್ಯುತ್ ನಿಗಮ) ಸೂಚನೆ ಹೊರಡಿಸಿದೆ.
ಜಲಾಶಯ ಶಿವಮೊಗ್ಗ ಜಿಲ್ಲೆಯಲ್ಲಿದ್ದರೂ ಶರಾವತಿ ಹರಿದು ಸಮುದ್ರ ಸೇರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ. ಹಾಗಾಗಿ ಒಂದು ವೇಳೆ ಹೆಚ್ಚುವರಿ ನೀರನ್ನು ಹೊರಬಿಟ್ಟರೆ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸೇರಿದಂತೆ ಹಲವಾರು ಪ್ರದೇಶಗಳು ಪ್ರವಾಹಕ್ಕೆ ಸಿಲುಕುತ್ತವೆ. ಆದ್ದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಜನರು ತಮ್ಮ ಜನ , ಜಾನುವಾರು ಮುಂತಾದವುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಲಾಗಿದೆ.
ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದೆ. ಹೀಗಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ.
ಜಲಾಶಯದ ಗರಿಷ್ಠ ಮಟ್ಟ 1819.00 ಅಡಿಗಳಾಗಿದೆ. ಶುಕ್ರವಾರ ಜಲಾಶಯದ ನೀರಿನ ಮಟ್ಟ 1,806.85 ಅಡಿಗಳಾಗಿದೆ. ಒಳ ಹರಿವು ಕೂಡ 12,286 ಕ್ಯೂಸೆಕ್ ಗೆ ಏರಿದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ಒಳ ಹರಿವು ಮುಂದುವರೆದರೆ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ.
ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಈ ಬಗ್ಗೆ ನದಿ ಪಾತ್ರದ ಜನರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತ ಹಾಗೂ ಹೊನ್ನಾವರ ತಾಲೂಕಾಡಳಿತ ಸನ್ನದ್ಧವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…
PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…
ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…
ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…
ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…