ಕಾರವಾರ: ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಕರಾವಳಿಯಲ್ಲಿ ಮತ್ತೆ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜತೆಗೆ ಮಲೆನಾಡು ಜಿಲ್ಲೆಗಳಲ್ಲಿಯೂ ವ್ಯಾಪಕವಾಗಿ ಮಳೆ ಬೀಳಲಿದೆ. ಕೆಲ ಪ್ರದೇಶಗಳಲ್ಲಂತೂ ಅಧಿಕದಿಂದ ಅತ್ಯಧಿಕ ಮಳೆ ಬೀಳಲಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಮಳೆ ಸುರಿಯಲಿದೆ. ಅಲ್ಲಲ್ಲಿ ಸಾಧಾರಣವಾಗಿಯೂ ಮಳೆ ಬೀಳಲಿದೆ.

ಸೆ.20ರ ವರೆಗೆ ಇದೇ ರೀತಿಯ ಮಳೆ ವಾತಾವರಣ ಇರಲಿದೆ ಎಂದು ಕರ್ನಾಟಕ ರಾಜ್ಯ ರಾಷ್ಟ್ರೀಯ ವಿಪತ್ತು ಮೇಲ್ವಿಚಾರಣಾ ಕೇಂದ್ರ ಈ ಸೂಚನೆ ನೀಡಿದೆ.

ಅಲ್ಲದೆ, ಅರಬ್ಬಿ ಸಮುದ್ರದಲ್ಲಿಯೂ ವಾತಾವರಣದಲ್ಲಿ ವ್ಯತ್ಯಾಸವಾಗುವುದರಿಂದ ಗಾಳಿಯ ವೇಗ ಹೆಚ್ಚಿರಲಿದೆ. ಕೆಲ ದಿನಗಳ ಮಟ್ಟಿಗೆ ಅಲ್ಲಲ್ಲಿ ಈ ರೀತಿಯ ವಾತಾವರಣ ಕಾಣಿಸಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.