ಉತ್ತರ ಕನ್ನಡ: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಅತಿಯಾದ ಮಳೆ ಸುರಿದು ಅತಿವೃಷ್ಟಿ ಉಂಟಾಗಿದೆ. ಹಾಗಾಗಿ ಮತ್ತೊಮ್ಮೆ ಬೆಳೆ ಸಮೀಕ್ಷೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮಾಹಿತಿ ನೀಡಿದರು. ರಾಜ್ಯದ 23 ಜಿಲ್ಲೆಗಳ 130 ತಾಲ್ಲೂಕುಗಳು ಅತಿವೃಷ್ಟಿಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆ ಕುರಿತು ಕೇಂದ್ರ ಸರ್ಕಾರಕ್ಕೆ ಅತಿವೃಷ್ಟಿ ಪೀಡಿತ ಪಟ್ಟಿ ಕಳುಹಿಸಿಕೊಡಲಾಗಿದೆ.

ಈಗಾಗಲೇ ಕೇಂದ್ರ ಸರ್ಕಾರ ಅತಿವೃಷ್ಟಿ ಪರಿಹಾರವಾಗಿ ₹ 395 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಈ ಹಣ ಸಾಕಾಗುವುದಿಲ್ಲ. ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.