ರಾಜ್ಯದ ಕಾಫಿ, ಅಡಿಕೆ, ಮೆಣಸು, ಏಲಕ್ಕಿ ಬೆಳಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಕೆಯಾಗಿದೆ. ಸಮಸ್ಯೆಯಲ್ಲಿರುವ ರೈತರಿಗೆ ಹಲವು ರೀತಿಯಲ್ಲಿ ಸೌಲಭ್ಯಗಳನ್ನು ಕೊಡಬೇಕು ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.

ಈ ಪ್ರಸ್ತಾವದಿಂದ ಯಾವೆಲ್ಲ ರೈತರಿಗೆ ಉಪಯೋಗ ಆಗಬಹುದು? ಪ್ರಸ್ತಾವದಲ್ಲಿ ಏನಿದೆ? ಪ್ಯಾಕೇಜ್ ಘೋಷಣೆಯಾದರೆ ರೈತರಿಗೆ ಎಷ್ಟು ಲಾಭ ಆಗಲಿದೆ ಎನ್ನುವ ಚರ್ಚೆಗಳು ಶುರುವಾಗಿದೆ. ಪ್ರಸ್ತಾವದ ಪೂರ್ಣ ವಿವರ ಇಲ್ಲಿದೆ.

ಸತತ ಬರಗಾಲ, ಭಾರೀ ಪ್ರವಾಹ ಹಾಗೂ ರೋಗಗಳಿಂದ ತತ್ತರಿಸಿ ಹೋಗಿರುವ ಕಾಫಿ, ಅಡಿಕೆ, ಮೆಣಸು, ಏಲಕ್ಕಿ ಬೆಳೆಗಾರರು  ಮತ್ತು ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ತಕ್ಷಣವೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸಚಿವ ಸಿ.ಟಿ.ರವಿ ಅವರು ಕೇಂದ್ರದ ಎದುರು ಪ್ರಸ್ತಾವ ಇಟ್ಟಿದ್ದಾರೆ.

ಈಚೆಗೆ ನವದೆಹಲಿಯಲ್ಲಿ ಕೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರೈತರ ಕಷ್ಟಗಳನ್ನು ವಿವರಿಸಿದ್ದಾರೆ.

ಸಚಿವರ ಪ್ರಸ್ತಾವ ಏನು?

ಈ ಹಿಂದೆ  2015-16, 2016-17, 2017-18ರಲ್ಲಿ  ಉಂಟಾದ ಸತತ ಬರಗಾಲ ಹಾಗೂ 2019-20 ಹಾಗೂ ಪ್ರಸಕ್ತ ವರ್ಷವೂ  ಜಿಲ್ಲೆಯಲ್ಲಿ ಭಾರೀ ಪ್ರವಾಹ ಉಂಟಾಗಿ ಬೆಳೆದು ನಿಂತಿದ್ದ ಕಾಫಿ, ಅಡಿಕೆ, ಮೆಣಸು, ಏಲಕ್ಕಿ, ಬಾಳೆ, ಭತ್ತ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಸ್ವಯಂ ಉದ್ಯೋಗಕ್ಕೆ ಹೈನುಗಾರಿಕೆ, ಗೊಬ್ಬರ ತಯಾರಿಕೆ ತರಬೇತಿ – ಸಾಲ

ಈ ಬಾರಿ ರಾಜ್ಯದಲ್ಲಿ ಕೋವಿಡ್-19 ಸೋಂಕು ಬಂದ ಪರಿಣಾಮ ರೈತರ ಪರಿಸ್ಥಿತಿ ಹೇಳತೀರದಾಗಿದೆ. ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ, ಅಲ್ಪಾವಧಿ ಬೆಳೆ ಸಾಲ ವಿತರಣೆ, ಕೃಷಿ ಬೆಳೆ ಸಾಲದ ಮಿತಿಯನ್ನು  ಮೂರು ಲಕ್ಷ ರೂ.ಗೆ ಹೆಚ್ಚಳ ಮಾಡಬೇಕು.

ಸೂರ್ಯಕಾಂತಿ ಬೆಳೆಯಲ್ಲಿ ರೋಗ ಕಂಡರೆ ತಕ್ಷಣವೇ ಹೀಗೆ ಮಾಡಿ

ಪ್ರಸಕ್ತ ವರ್ಷ ರೈತರಿಗೆ ನೀಡುವ ಸಾಲಕ್ಕೆ ಬಡ್ಡಿ ವಿಧಿಸಬಾರದು. ಕಾಫಿ ಮಂಡಳಿಗೆ ಬಾಕಿ ಇರುವ ಸಹಾಯಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ರಸಗೊಬ್ಬರ, ಕ್ರಿಮಿನಾಶಕ ಸೇರಿದಂತೆ ಮತ್ತಿತರ ವಸ್ತುಗಳಿಗೆ ಜಿಎಸ್ ಟಿಯಿಂದ ವಿನಾಯ್ತಿ ಹಾಗೂ ರಸಗೊಬ್ಬರಗಳಿಗೆ ಸಹಾಯಧನ ಘೋಷಿಸುವಂತೆ ಮನವಿ  ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಯೂರಿಯಾ ಬಳಸುವ ಮುನ್ನ ಎಚ್ಚರ: ತಜ್ಞರು ಕೊಟ್ಟ ಸಲಹೆ ಏನು?

ವಿಶೇಷವಾಗಿ ಸಣ್ಣ ಕಾಫಿ ಬೆಳೆಗಾರರಿಗೆ ಆದಾಯ ತೆರಿಗೆ ನಿಯಮ 1961ರ ನಿಯಮ 7 ಬಿ(1) ರದ್ದುಗೊಳಿಸಬೇಕು. ಹಲವು ರೀತಿಯ ರಿಯಾಯಿತಿಗಳನ್ನು ನೀಡಬೇಕು ಎಂದು ಪ್ರಸ್ತಾಪಿಸಿದ್ದಾರೆ. ಅದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಾರ್ತಾ ಇಲಾಖೆ ತಿಳಿಸಿದೆ.