ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ್ದ 5237 ಕ್ಲರ್ಕ್ ಪೋಸ್ಟ್ಗಳ ನೇಮಕಾತಿ ಅಧಿಸೂಚನೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಹುದ್ದೆಗೆ ಆನ್‌ಲೈನ್ ನೋಂದಣಿ (ಅರ್ಜಿ ಸಲ್ಲಿಸುವ) ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ನೇಮಕಾತಿ ಸಂಬAಧಿಸಿದAತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಏಪ್ರಿಲ್‌ನಲ್ಲಿ ಪರೀಕ್ಷೆ ನೋಟಿಫಿಕೇಶನ್ ಬಿಡುಗಡೆ ಮಾಡಿತ್ತು. ಹೊಸ ವೇಳಾಪಟ್ಟಿ ಪ್ರಕಾರ ಮೇ 2೦ ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಮೊದಲು ಮೇ 17 ರವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು. ಆಯ್ಕೆಯಾದ ಅಭ್ಯರ್ಥಿಗೆ 13,075 ರೂ. ಮೂಲ ವೇತನದ ಜತೆಗೆ ಭತ್ಯೆಗಳನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಅಭ್ಯರ್ಥಿಗಳು bank.sbi/careers ಅಥವಾ www.sbi.co.in ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡ ಬೇಕು.
  • ಎಸ್‌ಬಿಐ ಕ್ಲರ್ಕ್- 2021 ನೇಮಕಾತಿಗೆ ಸಂಬAಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಬಳಿಕ ‘Click for New Registration’ ಎಂದಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹೆಸರು, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಭರ್ತಿ ಮಾಡಿ ನೋಂದಣಿ ಮಾಡಿಸಬೇಕು.
  • ಬಳಿಕ ವಿದ್ಯಾರ್ಹತೆ ಮಾಹಿತಿಗಳನ್ನು ಭರ್ತಿ ಮಾಡಬೇಕು.
  • ಮೂರನೇ ಹಂತದಲ್ಲಿ ಸ್ಕಾö್ಯನ್ ಮಾಡಿದ ಪಾಸ್‌ಪೋರ್ಟ್ ಅಳತೆಯ ಫೋಟೋ, ಸಹಿ ಅಪ್‌ಲೋಡ್ ಮಾಡಬೇಕು.
  • ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಬೇಕು.

ಅರ್ಜಿ ಸಲ್ಲಿಕೆಗೆ ವೆಬ್‌ಸೈಟ್: sbi.co.in

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 27-04-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-05-2021
ಎಸ್‌ಬಿಐ ಕ್ಲರ್ಕ್ ಪರೀಕ್ಷೆ : 31-06-2021

ಒಟ್ಟು ಹುದ್ದೆಗಳ ಸಂಖ್ಯೆ : 5237
ಕರ್ನಾಟಕದಲ್ಲಿರುವ ಹುದ್ದೆಗಳು: 509
ವಿದ್ಯಾರ್ಹತೆ: ಯಾವುದೇ ಪದವಿ

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ, ಹಿಂದುಳಿದ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 750 ರೂ.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅರ್ಜಿ ಶುಲ್ಕವನ್ನು ನೆಟ್‌ಬ್ಯಾಂಕಿAಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಎಸ್‌ಬಿಐ ಚಲನ್ ಮೂಲಕ ಪಾವತಿಸಬಹುದು ಎಂದು ಎಸ್‌ಬಿಐ ತಿಳಿಸಿದೆ.