ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ “ಇ-ವಾಣಿಜ್ಯ ಸಂಸ್ಥೆಗಳಾದ ಝೋಮಾಟೋ, ಸ್ವಿಗ್ಗಿ, ಉಬರ್ ಹಾಗೂ ಅಮೇಜಾನ್ ಮತ್ತಿತರ  (Zomato, Swiggy, Uber ets, Amazon) ಸಂಸ್ಥೆಗಳಲ್ಲಿ ಉದ್ಯೋಗ ಪಡೆದು ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಯುವಕರಿಗೆ ದ್ವಿಚಕ್ರ ವಾಹನ (ಬೈಕ್) ಕೊಂಡುಕೊಳ್ಳಲು ನಿಗಮದಿಂದ 25,000 ರೂ.ಗಳ ಸಹಾಯ ಧನ ನೀಡಲಾಗುತ್ತಿದೆ.

ಉಳಿದ ಮೊತ್ತವನ್ನು ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕು. ಅರ್ಹ ಯುವಕರು ಇ-ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗ ಪಡೆದಿರುವ ಬಗ್ಗೆ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಡಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ 2020ರ ಡಿಸೆಂಬರ್ 19 ರೊಳಗಾಗಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳು ನಿಗಮದ ಜಿಲ್ಲಾ ಕಚೇರಿಯಿಂದ ಉಚಿತವಾಗಿ ಅರ್ಜಿ ನಮೂನೆ ಅಥವಾ ನಿಗಮದ  www.dbcdc.karnataka.gov.in ವೆಬ್‍ಸೈಟ್‍ದಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ  ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.  ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ನ್ನು ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ಕಚೇರಿ ಮೊಬೈಲ್ ಸಂಖ್ಯೆ 08472-278635 ಅಥವಾ www.dbcdc.karnataka.gov.in ಸಂಪರ್ಕಿಸಲು ಕೋರಲಾಗಿದೆ.

ಯಾರು ಅರ್ಹರು?

ಪ್ರವರ್ಗ-1 ಹಾಗೂ ಪ್ರವರ್ಗ-2ಎ, 3ಎ ಹಾಗೂ 3ಬಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದಾಖಲೆ ಏನು ಬೇಕು?

ಅಭ್ಯರ್ಥಿಯು 18 ರಿಂದ 55 ವರ್ಷದೊಳಗಿರಬೇಕು. ಗ್ರಾಮೀಣ ಪ್ರದೇಶದವರ ವಾರ್ಷಿಕ ಆದಾಯ 98 ಸಾವಿರ ರೂ. ಹಾಗೂ ಪಟ್ಟಣ ಪ್ರದೇಶದವರ ವಾರ್ಷಿಕ ಆದಾಯ 1.20 ಲಕ್ಷ ರೂ. ಒಳಗಿರಬೇಕು. ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್‍ಕಾರ್ಡ್ ದಾಖಲೆಗಳನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಐ.ಎಫ್.ಎಫ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಯಕೃತ ಗ್ರಾಮೀಣ ಬ್ಯಾಂಕ್‍ಗಳಲ್ಲಿ ಖಾತೆ ಹೊಂದಿರಬೇಕು.