ಕರ್ನಾಟಕ ವಾರ್ತೆ: ರೈತ ಸಂಪರ್ಕ ಕೇಂದ್ರಗಳ ಮೂಲಕ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ 2021-22ನೇ ಸಾಲಿನ ತಾಡಪತ್ರಿ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಡಪತ್ರಿಗಳನ್ನು ಪಡೆಯಲಿಚ್ಚಿಸುವ ರೈತರು ಆಧಾರ ಕಾರ್ಡ್, ಜಮೀನಿನ ಉತಾರ, ಬ್ಯಾಂಕ್ ಪಾಸ್‍ಬುಕ್ ನಕಲು ಪ್ರತಿಯೊಂದಿಗೆ ಅರ್ಜಿಯನ್ನು ದಿನಾಂಕ 14-02-2022 ರೊಳಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸಬೇಕು.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ತಾಡಪತ್ರಿಗಳನ್ನು ಪಡೆದ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮಕ್ಕೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.