ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ತಾಡಪತ್ರಿ ವಿತರಣೆ- ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಲಾಟರಿ ಮುಖಾಂತರ ತಾಡಪತ್ರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಾಡಪತ್ರಿಗಳನ್ನು ಪಡೆಯಲಿಚ್ಚಿಸುವ ರೈತರು ಆಧಾರಕಾರ್ಡ, ಜಮೀನಿನ ಉತಾರ, ಬ್ಯಾಂಕ್ ಪಾಸ್‍ಬುಕ್ ಹಾಗೂ ಜಾತಿ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ದಿನಾಂಕ 19-04-2021 ರೊಳಗಾಗಿ ಸಲ್ಲಿಸಬೇಕು.
ಈ ಹಿಂದೆ ತಾಡಪತ್ರಿಗಳನ್ನು ಪಡೆದ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ತಾಡಪತ್ರಿ ವಿತರಣೆ ಕಾರ್ಯಕ್ರಮ ದಿನಾಂಕ 21-04-2021 ರಂದು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಲಾಟರಿ ಮುಖಾಂತರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಆಯ್ಕೆಯಾದ ರೈತ ಫಲಾನುಭವಿಗಳಿಗೆ ದಿನಾಂಕ 23-04-2021 ರಿಂದ ದಿನಾಂಕ 30-04-2021 ರವರೆಗೆ ಹಂಚಿಕೆ ಮಾಡಲಾಗವುದು.
ಹಂಚಿಕೆ ಮಾಡುವ ಕೊನೆಯ ದಿನಾಂಕದೊಳಗೆ ಆಯ್ಕೆಯಾದ ಫಲಾನುಭವಿಗಳು ತಮ್ಮ ತಾಡಪತ್ರಿಗಳನ್ನು ತೆಗೆದುಕೊಂಡು ಹೋಗಬೇಕು. ಇಲ್ಲವಾದಲ್ಲಿ ಅವಶ್ಯಕತೆ ಇದ್ದ ರೈತರಿಗೆ ಹಂಚಿಕೆ ಮಾಡಲಾಗುವುದು.
ಲಾಟರಿ ಎತ್ತುವ ದಿನಾಂಕದಂದು ಅರ್ಜಿ ನೀಡಿದ ಎಲ್ಲ ರೈತ ಬಾಂಧವರು ತಪ್ಪದೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮಕ್ಕೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
