Vidyasiri Scholarship Karnataka. ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ‘ವಿದ್ಯಾಸಿರಿ’ ಯೋಜನೆ ಜಾರಿ ಮಾಡಲಾಗಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ. 1,500/- ರಂತೆ, ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು (ಜೂನ್-2022 ರಿಂದ ಮಾರ್ಚ್-2023 ರವರೆಗೆ) ಅವರ ಬ್ಯಾಂಕ್ ಖಾತೆಗೆ, ಆನ್‌ಲೈನ್ ಮೂಲಕ ಜಮಾ ಮಾಡಲಾಗುತ್ತದೆ.

ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ‘ವಿದ್ಯಾಸಿರಿ’ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ, ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದು ಹಲವರ ಪ್ರಶ್ನೆ. ಅದಕ್ಕೆ ಉತ್ತರ ಇಲ್ಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ದಾಖಲಾತಿಗಳನ್ನು ಸಂಬAಧಿಸಿದ ಪ್ರಾಂಶುಪಾಲರಿAದ ಧೃಡೀಕರಿಸಿ ಆನ್‌ಲೈನ್ ಜಾಲತಾಣ ವಿಳಾಸ https://sevasindhu.karnataka.gov.in/ ರಲ್ಲಿ ಅರ್ಜಿ ಸಲ್ಲಿಸಬೇಕು. ಜಿಲ್ಲೆಯ ಎಲ್ಲಾ ಹಿಂದುಳಿದ, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ವಿದ್ಯಾಸಿರಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲಾಗುತ್ತದೆ.

ಆನ್‌ಲೈನ್ ಅರ್ಜಿ ಸಲ್ಲಿಸಿದ ನಂತರ ಪ್ರಾಂಶುಪಾಲರಿAದ ದೃಢೀಕರಿಸಿದ ದಾಖಲಾತಿಗಳು ಹಾಗೂ ಆನ್‌ನಲ್ಲಿ ಸಲ್ಲಿಸಿದ ಅರ್ಜಿಯ ಹಾರ್ಡ್ ಪ್ರತಿಯನ್ನು ಜಿಲ್ಲಾ ಕಚೇರಿಗೆ ಹಾಗೂ ಸಂಬAಧಿಸಿದ ತಾಲೂಕು ಮಾಹಿತಿ ಕೇಂದ್ರಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 080-22230281 ಸಂಪರ್ಕಿಸಬಹುದು.